ದಾವಣಗೆರೆ, ಮಾ. 21 – ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರದ ವತಿಯಿಂದ ಇದೇ ದಿನಾಂಕ 25 ರಂದು ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ-51ರಲ್ಲಿನ ಉದ್ಯೋಗ ವಿನಿಮಯ ಕೇಂದ್ರದಲ್ಲಿ `ಉದ್ಯೋಗ ಮೇಳ’ ನಡೆಯಲಿದೆ.
ಮೇಳದಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎಸ್‍ಎಸ್‍ಎಲ್‍ಸಿ, ಐ.ಟಿ.ಐ, ಡಿಪ್ಲೋಮಾ, ಪಿಯುಸಿ, ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿವೆ. ವಿವರಕ್ಕೆ ದೂರವಾಣಿ ಸಂಖ್ಯೆ: 7483808321 ಗೆ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ಡಿ.ರವೀಂದ್ರ ತಿಳಿಸಿದ್ದಾರೆ.