ಯೋಗ ಪ್ರಶಸ್ತಿಗೆ ಅರ್ಜಿ

ದಾವಣಗೆರೆ, ಮಾ. 21 –  ಪ್ರಧಾನ ಮಂತ್ರಿ ರಾಷ್ಟ್ರೀಯ, ಅಂತರರಾಷ್ಟ್ರೀಯ ಮಟ್ಟದ ಅತ್ಯುನ್ನತ ಯೋಗ ಪ್ರಶಸ್ತಿಯನ್ನು ಘೋಷಿಸಲಾಗಿದ್ದು,  ಈ ಸಂಬಂಧ ಯೋಗ ಕ್ರೀಡೆಗೆ ಅತ್ಯುನ್ನತವಾದ ಕೊಡುಗೆ ನೀಡಿರುವಂತಹ ಕ್ರೀಡಾ ಪಟುಗಳು ಅಥವಾ ಯೋಗ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು  ಇದೇ ದಿನಾಂಕ 31 ಕೊನೆಯ ದಿನವಾಗಿದೆ.

ಪ್ರಶಸ್ತಿಗಾಗಿ ಜಿಲ್ಲೆಯ ಅರ್ಹ ಯೋಗ ಕ್ರೀಡಾಪಟುಗಳು ಅರ್ಜಿಗಳನ್ನು ಜಾಲತಾಣ https://innovateindia.mygov.in/pm-yoga-awards-2025/    ವೆಬ್‍ಸೈಟ್‍ನಲ್ಲಿ ಸಲ್ಲಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

error: Content is protected !!