ದಾವಣಗೆರೆ, ಮಾ.21- ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಸಂಘ, ಧಾರವಾಡ ದೈವಜ್ಞ ಬ್ರಾಹ್ಮಣ ಮಹಿಳಾ ಮಂಡಳಿ ಹಾಗೂ ಶ್ರೀ ಜ್ಞಾನೇಶ್ವರಿ ಮಹಿಳಾ ಮಂಡಳಿ ಸಂಯುಕ್ತಾಶ್ರಯದಲ್ಲಿ ನಾಳೆ ದಿನಾಂಕ 22ರ ಶನಿವಾರ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಗೌರಮ್ಮ ನರಹರಿ ಶೇಟ್ ಸಭಾಭವನದಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಉದ್ಘಾಟಿಸಲಿದ್ದಾರೆ. ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಸಂಘದ ಉಪಾಧ್ಯಕ್ಷರಾದ ಪ್ರೇಮಾ ರಾಮಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಜ್ಞಾನೇಶ್ವರಿ ಮಹಿಳಾ ಮಂಡಳಿ ಅಧ್ಯಕ್ಷೆ ವಿನೋದ ರಾಮ್‌ದಾಸ್ ರಾಯ್ಕರ್ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ತುಮಕೂರು ಹಿಂದುಳಿದ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಸೋನಿಯಾ ವೆರ್ಣೇಕರ್ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಗುತ್ತದೆ.
ಪತ್ರಿಕಾಗೋಷ್ಠಿಯಲ್ಲಿ ಜ್ಞಾನೇಶ್ವರಿ ಮಹಿಳಾ ಮಂಡಳಿ ಪದಾಧಿಕಾರಿಗಳಾದ ಚಂದ್ರಕಲಾ ವಿಠಲ್ ಅವಾಜಿ, ವಿಜಯಾ ನಾಗರಾಜ್ ಕುಡತ್ತರಕರ್, ಶಾರದಾ ಮೂರ್ತಿ ಕುಡತ್ತರಕರ್, ಸಂದ್ಯಾರಾಣಿ ಪ್ರೇಮ್ ಕರ್ಡೇಕರ್, ಗೀತಾ ಪ್ರದೀಪ್ ಭಟ್, ಶಾಲಿನಿ ಸಂತೋಷ್ ರಾಯ್ಕರ್, ವಾಸುದೇವ ರಾಯ್ಕರ್ ಇತರರು ಉಪಸ್ಥಿತರಿದ್ದರು.