ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಸಹಯೋಗದೊಂದಿಗೆ ಬಾಪೂಜಿ ಇಂಜಿನಿಯರಿಂಗ್ ಕಾಲೇಜಿನ ಉದ್ಯಮಶೀಲ ಅಭಿವೃದ್ಧಿ ಕೇಂದ್ರದಿಂದ `ಮಂಥನ-2025′ ಕಾರ್ಯಕ್ರಮವು ಇಂದು ಬೆಳಿಗ್ಗೆ 10.30ಕ್ಕೆ ಬಿಐಇಟಿ ಕಾಲೇಜಿನ ಆವರಣದಲ್ಲಿರುವ ಎಸ್.ಎಸ್.ಮಲ್ಲಿಕಾರ್ಜುನ್ ಸಾಂಸ್ಕೃತಿಕ ಸಭಾಭವನದಲ್ಲಿ ನಡೆಯಲಿದೆ.
`ಮಂಥನ-2025’ರ ಯೋಜನೆ ಅಡಿಯಲ್ಲಿ ಉದ್ಯಮ, ವಾಣಿಜ್ಯ ಮತ್ತು ಕೈಗಾರಿಕ ಬಲವರ್ಧನೆಗಾಗಿ ಯುವ ಉದ್ಯಮಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ಇದಾಗಿದೆ. ಸಂಪನ್ಮೂಲ ವ್ಯಕ್ತಿಗಳಾಗಿ ತೇಜಶ್ರೀ ಮತ್ತು ವಿನ್‌ಸೆಂಟ್ ಡಿಸೋಜಾ ಭಾಗವಹಿಸಲಿದ್ದಾರೆ. ಪ್ರಾಂಶುಪಾಲ ಡಾ.ಹೆಚ್.ಬಿ. ಅರವಿಂದ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ನಿರ್ದೇಶಕ ಪ್ರೊ. ವೈ.ವೃಷಭೇಂದ್ರಪ್ಪ ಹಾಗು ಡಾ. ಸಿ.ಆರ್. ನಿರ್ಮಲ ಆಗಮಿಸುವರು.