ದಾವಣಗೆರೆ,ಮಾ.23- ನಾಳೆ ದಿನಾಂಕ 24 ಮತ್ತು 25 ರಂದು ನಡೆಸಲು ಉದ್ದೇಶಿಸಲಾಗಿದ್ದ ಎರಡು ದಿನಗಳ ಅಖಿಲ ಭಾರತ ಬ್ಯಾಂಕ್ ಮುಷ್ಕರವನ್ನು ಮುಂದೂಡಲಾಗಿದೆ ಎಂದು ಬ್ಯಾಂಕ್ ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆಯ ಜಿಲ್ಲಾ ಸಂಚಾಲಕ ಕೆ.ರಾಘವೇಂದ್ರ ನಾಯರಿ ತಿಳಿಸಿದ್ದಾರೆ. ಹಣಕಾಸು ಸೇವೆಗಳ ಇಲಾಖೆಯ ಅಧಿಕಾರಿಗಳು, ಕೇಂದ್ರ ಕಾರ್ಮಿಕ ಆಯುಕ್ತರು ಹಾಗೂ ಬ್ಯಾಂಕ್ ಕಾರ್ಮಿಕ ಸಂಘಗಳ ನಡುವೆ ನಡೆದ ಸಭೆಯಲ್ಲಿ ಆಶಾದಾಯಕ ಬೆಳವಣಿಗೆಗಳು ನಡೆದ ಹಿನ್ನೆಲೆಯಲ್ಲಿ ಉದ್ದೇಶಿತ ಬ್ಯಾಂಕ್ ಮುಷ್ಕರವನ್ನು ಕೈಬಿಡಲಾಗಿದೆ ಎಂದು ಅವರು ಹೇಳಿದ್ದಾರೆ.
April 26, 2025