ಜಿಲ್ಲೆಯ ಗ್ರಾ.ಪಂ. ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆ ಮೀಸಲಾತಿ ನಿಗದಿ ದಿನಾಂಕ ಮುಂದೂಡಿಕೆ

ದಾವಣಗೆರೆ ಜ.20 -ಜಿಲ್ಲೆಯ 6 ತಾಲ್ಲೂಕುಗಳ ಎಲ್ಲ ಗ್ರಾ.ಪಂ ಗಳ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಹುದ್ದೆ ಮೀಸಲಾತಿ ನಿಗದಿಪಡಿಸಲು ದಿನಾಂಕಗಳನ್ನು ನಿಗದಿಪಡಿಸಲಾಗಿತ್ತು. ಕೋವಿಡ್ 19 ಲಸಿಕಾ ಕಾರ್ಯ ಕ್ರಮದ ಹಿನ್ನೆಲೆಯಲ್ಲಿ ಈ ದಿನಾಂಕಗಳನ್ನು ಮುಂದೂಡಿ ದಿನಾಂಕವನ್ನು ಮರು ನಿಗದಿಪಡಿಸಲಾಗಿದೆ.

ಗ್ರಾ.ಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸ ಲಾತಿ ಪ್ರಕ್ರಿಯೆಯು ಗ್ರಾ.ಪಂ ಸದಸ್ಯರ ಸಮಕ್ಷಮ ದಿನಾಂಕದಂದು ಜಿಲ್ಲಾಧಿಕಾರಿಗಳ ಕಚೇರಿ, ತುಂಗಭದ್ರಾ ಸಭಾಂಗಣದಲ್ಲಿ ಕೈಗೊಳ್ಳಲಾಗುವುದು.

ಇದೇ ದಿನಾಂಕ 27 ರಂದು ಬೆಳಿಗ್ಗೆ 10 ಗಂಟೆಗೆ ಹರಿಹರ ತಾಲ್ಲೂಕಿನ 24 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಹುದ್ದೆಯ ಮೀಸಲಾತಿ ನಿಗದಿ ಮಾಡಲಾಗುವುದು. ಹಾಗೂ ಮಧ್ಯಾಹ್ನ 2 ಗಂಟೆಗೆ ಹೊನ್ನಾಳಿ ತಾಲ್ಲೂಕಿನ 29 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಹುದ್ದೆಗಳ ಮೀಸಲಾತಿ ನಿಗದಿ ಮಾಡಲಾಗುವುದು.

ಇದೇ ದಿನಾಂಕ 28 ರಂದು ಬೆಳಿಗ್ಗೆ 10 ಗಂಟೆಗೆ ಜಗಳೂರು ತಾಲ್ಲೂಕಿನ 22 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಹುದ್ದೆಯ ಹಾಗೂ ಮಧ್ಯಾಹ್ನ 2 ಗಂಟೆಗೆ ದಾವಣಗೆರೆ ತಾಲ್ಲೂಕಿನ 42 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಹುದ್ದೆಯ ಮೀಸಲಾತಿ ನಿಗದಿ ಮಾಡಲಾಗುವುದು.

ಇದೇ ದಿನಾಂಕ 29 ರಂದು ಬೆಳಿಗ್ಗೆ 10 ಗಂಟೆಗೆ ನ್ಯಾಮತಿ ತಾಲ್ಲೂಕಿನ 17 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಹುದ್ದೆಯನ್ನು ಹಾಗೂ ಮಧ್ಯಾಹ್ನ 1 ಗಂಟೆಗೆ ಚನ್ನಗಿರಿ ತಾಲ್ಲೂಕಿನ 61 ಗ್ರಾಮ ಪಂಚಾಯಿತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಹುದ್ದೆಗಳ ಮೀಸಲಾತಿಯನ್ನು ನಿಗದಿ ಮಾಡಲಾಗುವು ದೆಂದು ಡಿಸಿ ಮಹಾಂತೇಶ್‍ ಬೀಳಗಿ ತಿಳಿಸಿದ್ದಾರೆ.

error: Content is protected !!