ದಾವಣಗೆರೆ, ಜ.24- ದೇಶದಲ್ಲಿನ ಅತ್ಯುತ್ತಮ ಪೊಲೀಸ್ ಠಾಣೆಗಳಲ್ಲಿ ನಗರದಲ್ಲಿನ ಮಹಿಳಾ ಪೊಲೀಸ್ ಠಾಣೆಯನ್ನೂ ಗುರುತಿಸಲಾಗಿದ್ದು, 68ನೇ ಸ್ಥಾನಕ್ಕೆ ಭಾಜನವಾಗಿದೆ. ಇತ್ತೀಚಿಗೆ ಕೇಂದ್ರ ಸರ್ಕಾರ ದೇಶದಲ್ಲಿನ 16,671 ಅತ್ಯುತ್ತಮ ಪೊಲೀಸ್ ಠಾಣೆಗಳೆಂದು ಆಯ್ಕೆ ಮಾಡಿತ್ತು. ಅದರಲ್ಲಿ 75 ಪೊಲೀಸ್ ಠಾಣೆಗಳ ಪಟ್ಟಿ ಮಾಡಲಾಗಿದ್ದು, ನಗರದಲ್ಲಿನ ಮಹಿಳಾ ಪೊಲೀಸ್ ಠಾಣೆ 68ನೇ ಸ್ಥಾನ ಪಡೆದಿದೆ. ಕರ್ನಾಟಕದಲ್ಲಿ ಇದು ಮೂರನೇ ಸ್ಥಾನವನ್ನು ಪಡೆದಿದೆ ಎಂದು ಹೇಳಲಾಗಿದೆ.
ಮಹಿಳೆಯರ ರಕ್ಷಣೆ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಅವರು ದುರ್ಗಾ ಪಡೆಯನ್ನು ಅಸ್ತಿತ್ವಕ್ಕೆ ತಂದಿದ್ದರು. ಅದರಲ್ಲಿ ಮಹಿಳಾ ಪೇದೆಗಳಿಗೆ ಉತ್ತಮ ತರಬೇತಿ ನೀಡಿ, ಮಹಿಳೆಯರ ರಕ್ಷಣೆಗೆ ವಿಶೇಷ ಆಸಕ್ತಿ ವಹಿಸಿದ್ದರು. ಈ ಹಿನ್ನೆಲೆಯಲ್ಲಿ ನಗರದಲ್ಲಿನ ಮಹಿಳಾ ಪೋಲಿಸ್ ಠಾಣೆ ದೇಶದಲ್ಲಿ 68ನೇ ಸ್ಥಾನ ಪಡೆಯುವಲ್ಲಿ ಸಹಕಾರಿ ಆಗಿದೆ ಎನ್ನಲಾಗಿದೆ.