ಆರೋಪಿಗಳ ಬಂಧನಕ್ಕೆ ಒತ್ತಾಯ
ರಾಣೇಬೆನ್ನೂರು, ಫೆ.3- ಪೋಲಿಯೋ ಡ್ರಾಪ್ಸ್ ಹಾಕುವ ಅಂಗನವಾಡಿ ಶಿಕ್ಷಕಿಯರ ಮೇಲೆ ಮುಷ್ಟೂರಿನ ಕೆಲ ಕಿಡಿಗೇಡಿಗಳು ಹಲ್ಲೆ ಮಾಡಿದ್ದು ಅವರನ್ನು ತಕ್ಷಣ ಬಂಧಿಸಿ ಕ್ರಮಕೈಗೊಳ್ಳಬೇಕು ಎಂದು ರೈತ ಸಂಘದ ಸಂಘಟನಾ ಕಾರ್ಯದರ್ಶಿ ರವೀಂದ್ರಗೌಡ ಪಾಟೀಲ ಒತ್ತಾಯಿಸಿದ್ದಾರೆ.
ಅಂಗನವಾಡಿ ಶಿಕ್ಷಕಿಯರು ಕೊರೊನಾ ಸಂದರ್ಭದಲ್ಲಿ ವಾರಿಯರ್ಸ್ ಆಗಿ ತಮ್ಮ ಜೀವದ ಹಂಗು ತೊರೆದು ಕಾರ್ಯ ನಿರ್ವಹಿಸಿದರು. ಇಂತಹವರಿಗೆ ಸರಿಯಾಗಿ ಸಂಬಳ ಸಿಗುತ್ತಿಲ್ಲ. ಎಲ್ಲ ಸರ್ಕಾರಿ ಸೇವೆಗಳಿಗೆ ಬಳಸಿಕೊಳ್ಳುವ ಇವರಿಗೆ ಸರ್ಕಾರ ರಕ್ಷಣೆ ನೀಡಬೇಕು.ಆರೋಪಿತರನ್ನು ಶೀಘ್ರವೇ ಬಂಧಿಸದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು ಎಂದು ಪಾಟೀಲ ಎಚ್ಚರಿಸಿದ್ದಾರೆ.