ದಾವಣಗೆರೆ, ಏ.5- ಬೆಂಗಳೂರು ನಗರ ಜಿಲ್ಲಾ ಸಾಹಿತ್ಯ ಪರಿಷತ್ತು ಹಾಗೂ ಚಿನ್ಮೂ ಲಾದ್ರಿ ಸಾಹಿತ್ಯ ವೇದಿಕೆ ಚಿತ್ರದುರ್ಗ ಇವರ ಸಹಯೋಗದಲ್ಲಿ ಜಿಲ್ಲಾ ಪತ್ರಕರ್ತರ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮ ದಲ್ಲಿ ಯೋಗ ಗುರು ರವಿ ಕೆ. ಅಂಬೇಕರ್‌ಗೆ `ಕನ್ನಡ ಸೇವಾರತ್ನ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷ ರಹಮತ್ ವುಲ್ಲಾ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯಶಿಕ್ಷಕಿ ಪುಷ್ಪವಲ್ಲಿ ಅಧ್ಯಕ್ಷತೆ ವಹಿಸಿದ್ದರು. ಚಿನ್ಮೂಲಾದ್ರಿ ಸಾಹಿತ್ಯ ವೇದಿಕೆ ಅಧ್ಯಕ್ಷೆ ದಯಾವತಿ ಪುತ್ತೂರ್ಕರ್, ಶಿಕ್ಷಕಿ ಚಾಂದಿನಿ ಖಾಲಿದ್, ಸಹ ಶಿಕ್ಷಕಿ ಕೆ. ಅಕ್ಷತ, ಸಾಹಿತಿ ಪಂಡ್ರಹಳ್ಳಿ ಶಿವರುದ್ರಪ್ಪ ಇನ್ನಿತರರು ಭಾಗವಹಿಸಿದ್ದರು.
April 17, 2025