ದಾವಣಗೆರೆ, ಜೂ.30- ಕೋವಿಡ್-19 ಸೋಂಕು ರಾಜ್ಯದಲ್ಲಿ ಹರಡುವುದನ್ನು ತಡೆಗಟ್ಟಲು ರಾಜ್ಯ ಸರ್ಕಾರ ಜೂ.28 ರಂದು ವಿಶೇಷ ಕಣ್ಗಾವಲು ಕ್ರಮಗಳನ್ನು ಕೈಗೊಂ ಡಿದ್ದು, ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ರೈಲಿನಲ್ಲಿ ಆಗಮಿ ಸುವ ಪ್ರಯಾಣಿಕರು 72 ಗಂಟೆಗಳ ಒಳಗೆ ಮಾಡಿಸಿರುವ ಆರ್ಟಿಪಿಸಿಆರ್ ನೆಗೆಟಿವ್ ಪರೀಕ್ಷಾ ವರದಿ ಅಥವಾ ಕನಿಷ್ಠ ಒಂದು ಡೋಸ್ ಕೋವಿಡ್-19 ನಿರೋಧಕ ಲಸಿಕೆ ಪಡೆದಿ ರುವ ಕುರಿತು ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರ ಬೇಕು ಎಂದು ಹುಬ್ಬಳ್ಳಿಯ ನೈರುತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.
January 25, 2025