ದಾವಣಗೆರೆ, ಏ. 14- ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ನವದೆಹಲಿ ಇವರ ವತಿಯಿಂದ ವಯೋಶ್ರೇಷ್ಠ ಸಮ್ಮಾನ್-2021 ರಾಷ್ಟ್ರ ಪ್ರಶಸ್ತಿಗಾಗಿ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಂದ, ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸ ಲಾಗಿದೆ. ಜಿಲ್ಲೆಯ ಅರ್ಹ ಹಿರಿಯ ನಾಗರಿಕರು, ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿ ಸಿದ್ದು, ಅರ್ಜಿಯನ್ನು ಆಂಗ್ಲ ಭಾಷೆಯ ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಇದೇ ದಿನಾಂಕ 26 ರೊಳಗಾಗಿ ಸಲ್ಲಿಸಬೇಕು. ಮಾಹಿತಿಗೆ ವೆಬ್ಸೈಟ್ http://socialjustice.nic.in ಪರಿಶೀಲಿಸಲು ಮತ್ತು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಎಂ.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ದೂರವಾಣಿ ಸಂಖ್ಯೆ: 08192-263939 ಇವರನ್ನು ಸಂಪರ್ಕಿಸುವುದು.
December 28, 2024