ದಾವಣಗೆರೆ, ಜು.6- ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದ ಸಭಾಂಗಣದಲ್ಲಿ ಜಿಲ್ಲಾಧ್ಯಕ್ಷ ಹನಗವಾಡಿ ವೀರೇಶ್ ಅಧ್ಯಕ್ಷತೆಯಲ್ಲಿ ವರ್ಚುಯಲ್ ಜಿಲ್ಲಾ ಕಾರ್ಯಕಾರಿಣಿ ನಡೆಯಿತು.
ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಸಭೆಗೆ ಚಾಲನೆ ನೀಡಿದರು. ಸಂಸದ ಜಿ.ಎಂ. ಸಿದ್ದೇಶ್ವರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾ ಚಾರ್ಯ, ಶಾಸಕರುಗಳಾದ ಎಸ್.ಎ. ರವೀಂದ್ರ ನಾಥ್, ಮಾಡಾಳು ವಿರೂಪಾಕ್ಷಪ್ಪ, ಎಸ್.ವಿ. ರಾಮಚಂದ್ರ, ಪ್ರೊ. ಲಿಂಗಣ್ಣ, ಬಿಜೆಪಿ ರಾಜ್ಯ ಉಪಾಧ್ಯಕ್ಷ ನಂದೀಶ್, ರಾಜ್ಯ ಕಾರ್ಯದರ್ಶಿ ಸುಧಾ ಜಯರುದ್ರೇಶ್, ವಿಭಾಗದ ಸಂಘಟನಾ ಕಾರ್ಯದರ್ಶಿ ಬಿ.ಎಸ್. ಜಗದೀಶ್, ಸೆೋಕ್ಕೆ ನಾಗಾರಾಜ್, ಶಾಂತರಾಜ್ ಪಾಟೀಲ್, ಜಿಲ್ಲಾ ಉಪಾಧ್ಯಕ್ಷ ಮಂಜಾನಾಯ್ಕ, ಶ್ರೀನಿವಾಸ್ ದಾಸ ಕರಿಯಪ್ಪ, ಜಿಲ್ಲಾ ಕಾರ್ಯದರ್ಶಿ ಲಿಂಗರಾಜ್ ಗೌಳಿ, ಜಿಲ್ಲಾ ಮಾಧ್ಯಮ ಪ್ರಮುಖ್ ಹೆಚ್.ಪಿ. ವಿಶ್ವಾಸ್ ಮತ್ತಿತರರು ಭಾಗವಹಿಸಿದ್ದರು.