ದಾವಣಗೆರೆ, ಜು.6- ಕಾಟನ್ ಮಾರ್ಕೆಟ್ ಶಾಲೆಯಲ್ಲಿ ಪ್ರಾಥಮಿಕ ಶಾಲೆ ನಡೆಯುತ್ತಿದ್ದು, ಇದೇ ಶೈಕ್ಷಣಿಕ ವರ್ಷದಿಂದಲೇ ಅಲ್ಲಿ ಸರ್ಕಾರಿ ಪ್ರೌಢಶಾಲೆಯನ್ನು ಪ್ರಾರಂಭಿಸುವಂತೆ ಶಾಸಕ ಎಸ್.ಎ. ರವೀಂದ್ರನಾಥ್ ಅವರಿಗೆ ಮಕ್ಕಳ ಲೋಕ ಕಾರ್ಯಕಾರಿ ಸಮಿತಿ ಮನವಿ ಮಾಡಿದೆ.
ಇದರಿಂದ ಸಾವಿರಾರು ಕಾರ್ಮಿಕ ಬಡ ಕುಟುಂಬದ ಮಕ್ಕಳಿಗೆ ಅನುಕೂಲವಾಗಲಿದೆ.
ಬಡ ಮಕ್ಕಳಿಗೆ ಹಾಸ್ಟೆಲ್ ಆರಂಭಿಸಿದಲ್ಲಿ ಈ ಮಕ್ಕಳು ಶಿಕ್ಷಣ ವಂಚಿತರಾಗುವುದಿಲ್ಲ ಎಂದು ಮಕ್ಕಳ ಲೋಕದ ಸಂಸ್ಥಾಪಕ ಅಧ್ಯಕ್ಷ ಕೆ.ಎನ್. ಸ್ವಾಮಿ ಮನವಿಯಲ್ಲಿ ತಿಳಿಸಿದ್ದಾರೆ.