ನಗರದಲ್ಲಿ ಇಂದಿನ ಶ್ರೀ ಗುರು ಬಕ್ಕೇಶ್ವರ ಸ್ವಾಮಿ ರಥೋತ್ಸವ ರದ್ದು

ನಗರದಲ್ಲಿ ಇಂದಿನ ಶ್ರೀ ಗುರು ಬಕ್ಕೇಶ್ವರ ಸ್ವಾಮಿ ರಥೋತ್ಸವ ರದ್ದು - Janathavaniದಾವಣಗೆರೆ, ಏ. 16- ನಾಳೆ ದಿನಾಂಕ 17ರ ಶನಿವಾರ ನಡೆಯಬೇಕಿದ್ದ ನಗರದ ಶ್ರೀ ಗುರು ಬಕ್ಕೇಶ್ವರ ಸ್ವಾಮಿ ರಥೋತ್ಸವವನ್ನು ರದ್ದುಪಡಿಸಲಾಗಿದೆ ಎಂದು ಶ್ರೀ ಗುರು ಶಿವಯೋಗಿ ಬಕ್ಕೇಶ್ವರ ಮಹಾಸ್ವಾಮಿ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಅಥಣಿ ವೀರಣ್ಣ ತಿಳಿಸಿದ್ದಾರೆ. 

ಕೊರೊನಾ ವೈರಸ್ ಹೆಚ್ಚುತ್ತಿರುವ ಹಿನ್ನೆಲೆ ಹಾಗೂ ಸಾರ್ವಜನಿಕರ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿಯನ್ವಯ ಜಿಲ್ಲಾಧಿಕಾರಿಗಳ ಆದೇಶದ ಹಿನ್ನೆಲೆಯಲ್ಲಿ ಈ ರಥೋತ್ಸವವನ್ನು ರದ್ದುಪಡಿಸಲಾಗಿದೆ ಎಂದು ವಿವರಿಸಿದ್ದಾರೆ.

error: Content is protected !!