ಒಂದೇ ದಿನ 85ಕ್ಕೂ ಹೆಚ್ಚು ಸೋಂಕಿತರು ಪತ್ತೆ
ದಾವಣಗೆರೆ, ಏ. 16 – ಜಿಲ್ಲೆಯಲ್ಲಿ ಕೊರೊನಾ ಸ್ಥಿತಿ ಮತ್ತೆ ಉಲ್ಬಣಿಸಿದ್ದು, ಒಂದೇ ದಿನ 85ಕ್ಕೂ ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 414ಕ್ಕೆ ಏರಿಕೆಯಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ ಅತಿ ಹೆಚ್ಚಿನ 63 ಸೋಂಕಿತರು ಪತ್ತೆಯಾಗಿದ್ದಾರೆ. ಹರಿಹರದಲ್ಲಿ 11, ಜಗಳೂರಿನಲ್ಲಿ 3, ಚನ್ನಗಿರಿಯಲ್ಲಿ 5 ಹಾಗೂ ಹೊನ್ನಾಳಿಯಲ್ಲಿ ಮೂವರು ಸೋಂಕಿತರು ಪತ್ತೆಯಾಗಿದ್ದಾರೆ. ಇದೇ ದಿನ 25 ಜನರು ಕೊರೊನಾದಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.