ದಾವಣಗೆರೆ, ಏ. 19- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾ ನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಆನ್‍ಲೈನ್‍ನಲ್ಲಿ ನೀಡಲು ನಿರ್ಧರಿಸಲಾಗಿದೆ.
ಆಸಕ್ತರು ಇದೇ ದಿನಾಂಕ 27 ರ ಒಳಗಾಗಿ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವ
ಡಾ. ಎ. ಖಾದರ್‍ಪಾಷ
ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.