ದಾವಣಗೆರೆ, ಜು.9- ಜಿಲ್ಲೆಯಲ್ಲಿ ಶುಕ್ರವಾರ 32 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 5 ಜನರು ಮೃತಪಟ್ಟಿದ್ದಾರೆ. 66 ಜನರು ಗುಣ ಮುಖರಾಗಿದ್ದಾರೆಂದು ಜಿಲ್ಲಾಧಿಕಾರಿ ಗಳ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ದಾವಣಗೆರೆ ತಾಲ್ಲೂಕಿನಲ್ಲಿ 12, ಹರಿಹರ 7, ಜಗಳೂರು 2, ಚನ್ನಗಿರಿ 3, ಹೊನ್ನಾಳಿ ತಾಲ್ಲೂಕಿನ 7 ಹಾಗೂ ಹೊರ ಜಿಲ್ಲೆಯ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ 621 ಸಕ್ರಿಯ ಪ್ರಕರಣಗಳಿದ್ದು, ಇಲ್ಲಿಯವರೆಗೆ 578 ಜನರು ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.