ದಾವಣಗೆರೆ, ಏ. 22 – ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನದಲ್ಲಿ ಶ್ರೀದೇವಿಯ ದರ್ಶನವನ್ನು ನಾಳೆ ದಿನಾಂಕ 23ರ ಶುಕ್ರವಾರದಿಂದ ಮುಂದಿನ ಆದೇಶದವರೆಗೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪ್ರತಿ ಮಂಗಳವಾರ ಮತ್ತು ಶುಕ್ರವಾರಗಳಂದು ನಡೆಯುತ್ತಿದ್ದ ದಾಸೋಹವನ್ನೂ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.
ಕೋವಿಡ್-19 ಎರಡನೇ ಅಲೆ ಹೆಚ್ಚುತ್ತಿರುವುದರಿಂದ ಸರ್ಕಾರದ ಆದೇಶದನ್ವಯ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳ ಸೂಚನೆಯಂತೆ ಶ್ರೀ ದುರ್ಗಾಂಬಿಕಾ ದೇವಿಯ ದರ್ಶನವನ್ನು ನಿಲ್ಲಿಸಿದ್ದು, ಪ್ರತಿದಿನ ಬೆಳಿಗ್ಗೆ 6 ರಿಂದ 8 ಗಂಟೆಯವರೆಗೆ ಪೂಜೆ ನಡೆಯುವುದು. ನಂತರ ಬೆಳಿಗ್ಗೆ 8 ರಿಂದ ದೇವಸ್ಥಾನದ ಬಾಗಿಲನ್ನು ಮುಚ್ಚಲಾಗುವುದು ಎಂದು ದೇವಸ್ಥಾನದ ಟ್ರಸ್ಟ್ ಅಧ್ಯಕ್ಷರೂ ಆದ ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ. ಭಕ್ತಾದಿಗಳು ಹಾಗೂ ಸಾರ್ವಜನಿಕರು ಸಹಕರಿಸಬೇಕೆಂದು ಧರ್ಮದರ್ಶಿ ಗೌಡ್ರ ಚನ್ನಬಸಪ್ಪ ಮನವಿ ಮಾಡಿದ್ದಾರೆ.