ಹೂವಿನಹಡಗಲಿ, ಫೆ.22 – ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ, ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ್ ನೇತೃತ್ವದಲ್ಲಿ ಇಂದು ಸಂಜೆ ಪ್ರತಿಭಟನೆ ನಡೆಸಲಾಯಿತು. ಎತ್ತಿನ ಬಂಡಿಯೊಂದಿಗೆ ಖಾಲಿ ಸಿಲಿಂಡರ್ ಪ್ರದರ್ಶಿಸಿ ರಸ್ತೆಯಲ್ಲಿ ಅಡುಗೆ ಮಾಡಲಾಯಿತು. ನಂತರ ತಹಶೀಲ್ದಾರ್‍ರ ಮೂಲಕ ರಾಜ್ಯ ಪಾಲರಿಗೆ ಮನವಿ ಸಲ್ಲಿಸಲಾಯಿತು.ಇಟಿಗಿ ಕಾಂಗ್ರೆಸ್ ಅಧ್ಯಕ್ಷ ಚಿದಾನಂದ ಮೊದಲಾದವರು ಮಾತನಾಡಿದರು.
March 2, 2025