ಜಗಳೂರು, ಜು.13- ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ತೆರೆಯುತ್ತಿರುವುದು ಮಕ್ಕಳ ಶಿಕ್ಷಣದ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾದ ಬಿ.ಎ.ಬಸವರಾಜ್ ತಿಳಿಸಿದರು.
ಶಿಕ್ಷಣ ಇಲಾಖೆಯಿಂದ ಜಗಳೂರು ತಾಲ್ಲೂಕಿನ ಪಲ್ಲಾಗಟ್ಟೆಯಲ್ಲಿ ಮಂಗಳವಾರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಒಂದನೇ ಹಾಗೂ ಎರಡನೇ ತರಗತಿ ಆಂಗ್ಲ ಮಾಧ್ಯಮ ಶಾಲೆ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.
ಘನತ್ಯಾಜ್ಯ ವಿಲೇವಾರಿ ಘಟಕ ಲೋಕಾರ್ಪಣೆ: ಜಗಳೂರು ತಾಲ್ಲೂಕಿನ ಪಲ್ಲಾಗಟ್ಟೆ ಗ್ರಾಮದಲ್ಲಿ 11 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ವಾದ ಘನ ತ್ಯಾಜ್ಯ ವಿಲೇವಾರಿ ಘಟಕ ವನ್ನು ಮಂಗಳವಾರ ಜಿಲ್ಲಾ ಉಸ್ತು ವಾರಿ ಸಚಿವ ಬಿ.ಎ.ಬಸವರಾಜ್, ಸಂಸದ ಜಿ.ಎಂ.ಸಿದ್ದೇಶ್ವರ ಲೋಕಾರ್ಪಣೆ ಮಾಡಿದರು.