ಹರಪನಹಳ್ಳಿ, ಜು.14- ಗೃಹ ರಕ್ಷಕ ದಳದಲ್ಲಿ ಫ್ಲಟೂನ್ ಸಾರ್ಜೆಂಟ್ ಆಗಿ ಸೇವೆ ಸಲ್ಲಿಸುತ್ತಿರುವ ಪಟ್ಟಣದ ವಾಗೀಶ್ ಪೂಜಾರ್ ಅವರು 2020ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ.
ವಾಗೀಶ್ ಪೂಜಾರ್ ಅವರು ಸತತ 31 ವರ್ಷಗಳ ಕಾಲ ಸಲ್ಲಿಸಿದ ಅನನ್ಯ ಸೇವೆಯನ್ನು ಗುರುತಿಸಿ ಈ ಗೌರವ ನೀಡಲಾಗಿದೆ.
ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಿನ್ನೆ ನಡೆದ ಸಮಾರಂಭದಲ್ಲಿ ವಾಗೀಶ್ ಪೂಜಾರ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಪದಕ ನೀಡಿ ಗೌರವಿಸಿದ್ದಾರೆ.