ದಾವಣಗೆರೆ, ಫೆ. 26- 2020-21ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಖರೀ ದಿಸಲಾಗುವ ಭತ್ತ, ರಾಗಿ ಮತ್ತು ಬಿಳಿಜೋಳ ಸಂಗ್ರಹ ಣೆಗೆ ಸಂಬಂಧಿಸಿದಂತೆ ಪ್ರಸಕ್ತ ಸಾಲಿನಲ್ಲಿ ರೈತರಿಂದ ಹೆಚ್ಚು ಆಹಾರ ಧಾನ್ಯಗಳನ್ನು ಖರೀದಿಸುವ ಉದ್ದೇಶ ದಿಂದ ಪ್ರತಿ ಎಕರೆಗೆ ನಿಗದಿಪಡಿಸಿರುವ ಮಿತಿಯನ್ನು ಮುಂದುವರೆಸಿದ್ದು, ಗರಿಷ್ಠ ಮಿತಿಯನ್ನು ತೆರವುಗೊಳಿ ಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಟಾಸ್ಕ್ಫೋ ರ್ಸ್ ಸಮಿತಿ ಅಧ್ಯಕ್ಷ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.
2020-21ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಜಿಲ್ಲೆಯ ರೈತರಿಂದ ಭತ್ತ, ರಾಗಿ ಮತ್ತು ಬಿಳಿಜೋಳ ಖರೀದಿ ಕಾರ್ಯ ಈಗಾಗಲೇ ಜಾರಿಯಲ್ಲಿದೆ. ಸರ್ಕಾರವು ಜಿಲ್ಲೆಗೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವನ್ನು ಖರೀದಿ ಏಜೆನ್ಸಿಯಾಗಿ ನೇಮಕ ಮಾಡಿ ಆದೇಶಿಸಿದೆ.
ಜಿಲ್ಲಾಧಿಕಾರಿಗಳ ನೇತೃತ್ವದ ಜಿಲ್ಲಾ ಟಾಸ್ಕ್ಪೋರ್ಸ್ ಸಮಿತಿ ತೀರ್ಮಾನದಂತೆ ಉತ್ತಮ ಗುಣಮಟ್ಟದ ಭತ್ತ ವನ್ನು ರೈತರಿಂದ ಎಪಿಎಂಸಿ ಪ್ರಾಂಗಣದಲ್ಲಿನ ಖರೀದಿ ಕೇಂದ್ರಗಳಲ್ಲಿ ಗುಣಮಟ್ಟ ಪರಿಶೀಲಿಸಿ, ನಂತರ ರೈತರಿಗೆ ಸಮೀಪವಿರುವ ಅಕ್ಕಿಗಿರಣಿಯಲ್ಲಿ ಖರೀದಿಸಲಾಗುತ್ತಿದೆ. ಮುಂದುವರೆದಂತೆ ಸರ್ಕಾರದ ಆದೇಶದಂತೆ ಜಿಲ್ಲೆಯ ಅರ್ಹ ರೈತರಿಂದ ರಾಗಿ, ಬಿಳಿಜೋಳ (ಹೈಬ್ರಿಡ್/ಮಾಲ್ದಂಡಿ) ವನ್ನು ಆಯಾ ಎಪಿಎಂಸಿ ಪ್ರಾಂಗಣದಲ್ಲಿನ ಖರೀದಿ ಕೇಂದ್ರಗಳಲ್ಲಿ ಗುಣಮಟ್ಟ ಪರಿಶೀಲಿಸಿ, ಖರೀದಿಸುವ ಕಾರ್ಯ ಪ್ರಗತಿಯಲ್ಲಿದೆ.
ಈಗಾಗಲೇ ಆಹಾರ ಧಾನ್ಯಗಳನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮಾರಾಟ ಮಾಡಿರುವ ರೈತರಿಂದ ಕೂಡಾ ಗರಿಷ್ಠ ಮಿತಿಯನ್ನು ಸಡಿಲಿಸಿ ಆಹಾರ ಧಾನ್ಯಗಳನ್ನು ಖರೀದಿಸಲು ಅವಕಾಶ ಕಲ್ಪಿಸಲಾಗಿದ್ದು, ಜಿಲ್ಲೆಯ ಎಲ್ಲಾ ಅರ್ಹ ರೈತರು ಸರ್ಕಾರದ ಈ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.