ದಾವಣಗೆರೆ, ಏ.27- ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಅಥವಾ ಕೃಷಿ ಪರಿಕರ ಸಾಗಾಣಿಕೆಗಳಿಗೆ ಯಾವುದೇ ರೀತಿಯ ನಿರ್ಬಂಧವಿರುವುದಿಲ್ಲ ಎಂದು ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕಗಳ ಮಾರಾಟಗಾರರ ಸಂಘದ ಅಧ್ಯಕ್ಷರು ಮತ್ತು ಜಿಲ್ಲಾ ಭಾಜಪ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಲೋಕಿಕೆರೆ ನಾಗರಾಜ್ ತಿಳಿಸಿದ್ದಾರೆ.
ರೈತರ ಕೃಷಿ ಚಟುವಟಿಕೆಗಳಿಗೆ ಸಹಕರಿಸಲು ರೈತ ಬಾಂಧವರು ಮತ್ತು ವ್ಯಾಪಾರಸ್ಥರ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಅಂಗಡಿಗಳು ಬೆಳಿಗ್ಗೆಯಿಂದ ಮಧ್ಯಾಹ್ನ 2 ಗಂಟೆಯವರೆಗೂ ತೆಗೆದಿರುತ್ತದೆ. ರೈತ ಬಾಂಧವರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರದೊಂದಿಗೆ, ಕೊರೊನಾ ಸುರಕ್ಷಿತ ನಿಯಮ ಪಾಲನೆ ಮಾಡಬೇಕೆಂದು ನಾಗರಾಜ್ ಮನವಿ ಮಾಡಿದ್ದಾರೆ.