ಹರಿಹರ, ಮಾ.4- ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘ (ರಿ)ಹರಿಹರ ಶಾಖೆಯ ಕಾರ್ಯದರ್ಶಿ ಸ್ಥಾನಕ್ಕೆ ನಗರಸಭೆಯ ಪ್ರಥಮ ದರ್ಜೆ ಸಹಾಯಕ ಎ. ನಸರುಲ್ಲಾ ರಾಜೀನಾಮೆ ನೀಡಿದ್ದಾರೆ .
ಕೆಲ ದಿನಗಳ ಹಿಂದೆ ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘದ ಹರಿಹರ ಶಾಖೆಯ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ನಸರುಲ್ಲಾ ಅವರನ್ನು ಕಾರ್ಯದರ್ಶಿಯನ್ನಾಗಿ, ಪೌರಕಾರ್ಮಿಕರಾದ ಪಿ.ಹೆಚ್. ಸದಾಶಿವ ಅವರನ್ನು ಅಧ್ಯಕ್ಷರನ್ನಾಗಿ ಘೋಷಿಸಲಾಗಿತ್ತು.
ಅಧ್ಯಕ್ಷ ಸ್ಥಾನಕ್ಕೆ ತಾವು ಯೋಗ್ಯ ವ್ಯಕ್ತಿಯಾಗಿದ್ದು, ಕಾರ್ಯದರ್ಶಿ ಹುದ್ದೆಯಲ್ಲಿ ಮುಂದುವರೆಯಲು ಆಸಕ್ತಿ ಇಲ್ಲದೇ ಇರುವುದರಿಂದ ಸದರಿ ಶಾಖೆಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ಹೇಳಿದ್ದು, ತಮ್ಮ ರಾಜೀನಾಮೆಯನ್ನು ಅಂಗೀಕರಿಸುವಂತೆ ಜಿಲ್ಲಾ ಕಾರ್ಯದರ್ಶಿ ವಿಶ್ವನಾಥ ಮತ್ತು ರಾಜ್ಯ ಕಾರ್ಯದರ್ಶಿ ಎನ್. ಪ್ರಸಾದ್ ಅವರಿಗೆ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಕೆಲ ಪೌರಸೇವಾ ನೌಕರರು ನಸ್ರುಲ್ಲಾ ರವರನ್ನು ಬೆಂಬಲಿಸಿದ್ದಾರೆ .