ದಾವಣಗೆರೆ,ಮೇ 3- ದಾವಣಗೆರೆ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನಲ್ಲಿ ನೂತನವಾಗಿ `ನಿರ್ವಹಣಾ ಮಂಡಳಿ (ಬಿಒಎಂ)’ ಯನ್ನು ರಚಿಸಲಾಗಿದ್ದು, ಈ ಮಂಡ ಳಿಯ ಅಧ್ಯಕ್ಷರಾಗಿ ಬ್ಯಾಂಕಿನ ಹಿರಿಯ ನಿರ್ದೇಶಕರ ಲ್ಲೊಬ್ಬರಾದ ಟಿ.ಎಸ್. ಜಯರುದ್ರೇಶ್ ಆಯ್ಕೆಯಾಗಿದ್ದಾರೆ.
ಬ್ಯಾಂಕಿನ ನಿರ್ದೇಶಕರುಗಳಾದ ದೇವರಮನೆ ಶಿವಕುಮಾರ್, ಕಂಚಿಕೆರೆ ಮಹೇಶ್ ಅವರುಗಳಲ್ಲದೇ, ಹಿರಿಯ
ಲೆಕ್ಕ ಪರಿಶೋಧಕರುಗಳಾದ ಬೆಳಗಾವಿ ಬಸವರಾಜಪ್ಪ, ಜಂಬಗಿ ರಾಧೇಶ್, ಸಾಫ್ಟ್ ವೇರ್ ಇಂಜಿನಿಯರ್ ಕೆ.ಕೊಟ್ರೇಶ್ ಅವರುಗಳು ಈ ಮಂಡಳಿಯ ಸದಸ್ಯರುಗಳಾಗಿದ್ದಾರೆ.
ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಕ್ಷ ಕೋಗುಂಡಿ ಬಕ್ಕೇಶಪ್ಪ ಅವರ ಅಧ್ಯಕ್ಷತೆಯಲ್ಲಿ ಬ್ಯಾಂಕಿನ ಸಭಾಂಗಣದಲ್ಲಿ ಮೊನ್ನೆ ನಡೆದ ಬ್ಯಾಂಕಿನ ಕಾರ್ಯ ನಿರ್ವಾಹಕ ಮಂಡಳಿ ಸಭೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಆದೇಶದನ್ವಯ ಈ ಮಂಡಳಿಯನ್ನು ರಚಿಸಲಾಗಿದೆ.
ಬ್ಯಾಂಕಿನ ಉಪಾಧ್ಯಕ್ಷ ಅಂದನೂರು ಮುಪ್ಪಣ್ಣ, ನಿರ್ದೇಶಕರುಗಳಾದ ಬಿ.ಸಿ. ಉಮಾಪತಿ, ಮತ್ತಿಹಳ್ಳಿ ವೀರಣ್ಣ, ಪಲ್ಲಾಗಟ್ಟಿ ಶಿವಾನಂದಪ್ಪ, ಎಂ. ಚಂದ್ರಶೇಖರ್, ಅಜ್ಜಂಪುರ ಶೆಟ್ರು ವಿಜಯಕುಮಾರ್, ಶ್ರೀಮತಿ ಸುರೇಖಾ ಎಂ. ಚಿಗಟೇರಿ, ನಲ್ಲೂರು ಎಸ್. ರಾಘವೇಂದ್ರ, ಇ.ಎಂ. ಮಂಜುನಾಥ, ವಿ. ವಿಕ್ರಮ್, ವೃತ್ತಿಪರ ನಿರ್ದೇಶಕರುಗಳಾದ ಮುಂಡಾಸ್ ವೀರೇಂದ್ರ, ಮಲ್ಲಿಕಾರ್ಜುನ ಕಣವಿ, ವಿಶೇಷ ಆಹ್ವಾನಿತರು ಗಳಾದ ಬೆಳ್ಳೂಡಿ ಮಂಜುನಾಥ್, ಎಂ. ದೊಡ್ಡಪ್ಪ ಅವರುಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಡಿ.ವಿ.ಆರಾಧ್ಯಮಠ್ ಸ್ವಾಗತಿಸಿದರು. ಉಪ ಪ್ರಧಾನ ವ್ಯವಸ್ಥಾಪಕ ಬಿ.ಎಸ್. ಮಲ್ಲೇಶ್ ವಂದಿಸಿದರು.