ದಾವಣಗೆರೆ, ಏ.4- ರಾಜ್ಯ ಮತ್ತು ಕೇಂದ್ರ ಸರ್ಕಾರ ಪಡಿತರವನ್ನು ಒಂದು ಯೂನಿಟ್ ಗೆ 10 ಕೆ.ಜಿ.ಯಂತೆ ಉಚಿತ ವಿತರಣೆ ಮಾಡಲು ಕಾಂಗ್ರೆಸ್ ಮುಖಂಡರು, ಜಿಲ್ಲಾ ಪಂಚಾಯತ್ ಸದಸ್ಯ ಕೆ.ಎಸ್. ಬಸವಂತಪ್ಪ ಒತ್ತಾಯಿಸಿದ್ದಾರೆ.
ಕೋವಿಡ್ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರವು ಲಾಕ್ ಡೌನ್ ಮಾಡಿದ್ದು, ಸರಿಯಾದ ಕ್ರಮವಾಗಿದೆ. ರಾಜ್ಯದಲ್ಲಿನ ಬಡವರಿಗೆ, ಪಡಿತರ ಫಲಾನುಭವಿಗಳಿಗೆ ಪ್ರತಿ ತಿಂಗಳು ಈ ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಒಂದು ಯೂನಿಟ್ ಗೆ 7 ಕಿ.ಜಿ. ಅಕ್ಕಿಯನ್ನು ಉಚಿತವಾಗಿ ನೀಡ ಲಾಗುತ್ತಿತ್ತು. ಆದರೆ, ಈಗಿನ ಬಿಜೆಪಿ ಸರ್ಕಾರ ಬಡವರಿಗೆ ಉಚಿತ ವಾಗಿ ನೀಡುತ್ತಿದ್ದ ಅನ್ನಭಾಗ್ಯ ಯೋಜ ನೆಯ ಉಚಿತ ಅಕ್ಕಿಯನ್ನು 7 ಕೆ.ಜಿ.ಯಿಂದ 5 ಕೆ.ಜಿ.ಗೆ ಕಡಿತಗೊಳಿಸಲಾ ಗಿತ್ತು ಎಂದು ತಿಳಿಸಿದ್ದಾರೆ. ಮೇ ತಿಂಗಳಲ್ಲಿ ಕೋವಿಡ್ ಪ್ರಮಾಣ ಹೆಚ್ಚಳವಾಗಿದ್ದು, ಈ ಸಂದರ್ಭದಲ್ಲಿ ಲಾಕ್ ಡೌನ್ ಮಾಡಲಾಗಿದ್ದು, ಬಡವರು, ರೈತರು, ಕೂಲಿ ಕಾರ್ಮಿಕರು ಕೈಯ್ಯಲ್ಲಿ ಕೆಲಸವಿಲ್ಲದೆ ಕಂಗಾಲಾಗಿದ್ದಾರೆ. ರಾಜ್ಯ ಸರ್ಕಾರ ಉಚಿತ ಪಡಿತರ ಅಕ್ಕಿಯನ್ನು ಇಂತಹ ಕಷ್ಟಕರ ಸಮಯದಲ್ಲಿ 5 ಕೆ.ಜಿ.ಯಿಂದ 2 ಕೆಜಿಗೆ ಇಳಿಸಿ ಬಡವರ ಹೊಟ್ಟೆಯ ಮೇಲೆ ಬರೆಯನ್ನು ಹಾಕಿದ್ದಾರೆ. ಬಡವರನ್ನು ಹಸಿವಿನಿಂದ ಸಾಯು ವಂತೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ರೈತ ಕೂಲಿ ಕಾರ್ಮಿಕರಿಗಾಗಿ ಈ ಹಿಂದಿನ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ರಾಷ್ಟ್ರೀಯ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೂಡಲೇ ರೈತ ಕೂಲಿ ಕಾರ್ಮಿಕರಿಗೆ ಉದ್ಯೋಗ ನೀಡಿ ಕೂಲಿ ಕಾರ್ಮಿಕರ ಹಿತವನ್ನು ಕಾಪಾಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.