ಅಸಂಘಟಿತ ಕಾರ್ಮಿಕರಿಗೆ ನೆರವು

ದಾವಣಗೆರೆ, ಜು.22- ಲಾಕ್‌ಡೌನ್‌ ಪರಿಣಾಮ ಆರ್ಥಿಕ ನಷ್ಟ ಅನುಭವಿಸಿದ ಅಸಂಘಟಿತ ಕಾರ್ಮಿಕ ವರ್ಗದವರಿಗೆ 2 ಸಾವಿರ ರೂ.ಗಳ ಒಂದು ಬಾರಿಯ ನೆರವಿನ ಪ್ಯಾಕೇಜ್‌ ಘೋಷಿಸಲಾಗಿದೆ. 

ಅಗಸರು, ಕ್ಷೌರಿಕರು, ಗೃಹಕಾರ್ಮಿಕರು, (ಮನೆಗೆಲಸ), ಟೈಲರ್‌ಗಳು, ಮೆಕ್ಯಾನಿಕ್, ಚಿಂದಿ ಆಯುವವರು, ಹಮಾಲರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು ಹಾಗೂ ಮಂಡಕ್ಕಿ ಭಟ್ಟಿ ಕಾರ್ಮಿಕ ವೃತ್ತಿಯಲ್ಲಿ ತೊಡಗಿರುವ ಕಾರ್ಮಿಕರಿಗೆ 2000 ರೂ.ಗಳ ಒಂದು ಬಾರಿಯ ನೆರವಿನ ವಿಶೇಷ ಪ್ಯಾಕೇಜ್‌ ಘೋಷಿಸಲಾ ಗಿರುತ್ತದೆ. ನೆರವಿನ ಮೊತ್ತ ಪಡೆಯಲು ಅಗತ್ಯ ದಾಖಲೆಗಳೊಂದಿಗೆ  http://sevasindhu.karnataka.gov.in ಪೋರ್ಟ್‌ಲ್‌ ನಲ್ಲಿ ದಿನಾಂಕ 31 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾ ಗಿದೆ. ಹೆಚ್ಚಿನ ಮಾಹಿತಿಗೆ ಕಾರ್ಮಿಕ ಸಹಾಯವಾಣಿ 155214 ಅನ್ನು ಸಂಪರ್ಕಿಸಲು ಕಾರ್ಮಿಕ ಅಧಿಕಾರಿ ಇಬ್ರಾಹಿಂ ಸಾಬ್ ತಿಳಿಸಿದ್ದಾರೆ.

error: Content is protected !!