ದಾವಣಗೆರೆ, ಮಾ.7- ಬೆಂಗಳೂರಿನ ಶೃತಿ ಸಾಧನಾ ಸಂಸ್ಥೆ ವತಿಯಿಂದ ಅಂತರರಾಷ್ಟ್ರಿಯ ಮಹಿಳಾ ದಿನಾಚರಣೆ ಪ್ರಯುಕ್ತ ಸಾಧನೆ ಮಾಡಿರುವ ಮಹಿಳೆಯರಿಗೆ ಕೊಡಲಾಗುವ ಮಹಿಳಾ ಸಾಧಕಿ ಪ್ರಶಸ್ತಿಯು ತ್ಯಾವಣಿಗೆ ಗ್ರಾಮದ ಸೃಜನಾ ಗ್ರಾಮೀಣಾ ಭಿವೃದ್ಧಿ ಸಂಸ್ಥೆ, ಮಂದಾರ ಹಿರಿಯ ಪ್ರಾಥಮಿಕ ಶಾಲೆ ಕಾರ್ಯದರ್ಶಿ ಆರ್. ಹಳದಮ್ಮ ಅವರಿಗೆ ಲಭಿಸಿದೆ.
ಗ್ರಾಮೀಣ ಪ್ರದೇಶದ ಹಿರಿಯ ನಾಗರಿಕರಿಗೆ ಗುರುತಿನ ಚೀಟಿ, ಸೃಜನಾ ಗ್ರಾಮೀಣಾಭಿವೃದ್ಧಿ ಸಂಸ್ಥೆಯಡಿಯಲ್ಲಿ ಸ್ತ್ರೀಶಕ್ತಿ ಸಂಘಗಳ ಮೂಲಕ ಮಹಿಳೆಯರನ್ನು ಆರ್ಥಿಕವಾಗಿ ಶಕ್ತರನ್ನಾಗಿ ಮಾಡಿ ಸ್ವಂತ ಕೆಲಸಗಳಿಗೆ ಉತ್ತೇಜನ ನೀಡಿದ್ದಾರೆ. ಅಲ್ಲದೇ ಇವರು ಕಾಲೇಜು ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸಿದ್ದಲ್ಲದೇ ಶಿಕ್ಷಣಕ್ಕೂ ಹೆಚ್ಚು ಪ್ರಾಮುಖ್ಯತೆ ನೀಡಿದ್ದು, ಇವರು ಮಂದಾರ ಹಿರಿಯ ಪ್ರಾಥಮಿಕ ಶಾಲೆಯ ಮೂಲಕ ಬಡ ಮಕ್ಕಳಿಗೆ ಕಡಿಮೆ ದರದಲ್ಲಿ ಶಿಕ್ಷಣ ಸಿಗುವಂತೆ ಮಾಡಿದ್ದಾರೆ. ಈ ಎಲ್ಲಾ ಸಮಾಜ ಸೇವೆ ಗುರುತಿಸಿ ಇತ್ತೀಚೆಗೆ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಹಿಂದೆ ದೆಹಲಿಯ ಇಂಟರ್ ನ್ಯಾಷನಲ್ ಬ್ಯುಸಿನೆಸ್ ಕೌನ್ಸಿಲ್ ಎಂಬ ಸಂಸ್ಥೆಯು ಇಂದಿರಾ ಗಾಂಧಿ ಸದ್ಭಾವನಾ ಪ್ರಶಸ್ತಿ ಮತ್ತು ಶಿಕ್ಷಕ ಶಿರೋಮಣಿ ಪ್ರಶಸ್ತಿ ನೀಡಿ ಗೌರವಿಸಿತ್ತು.