ಖಾಸಗೀಕರಣ ವಿರೋಧಿಸಿ ದೇಶವ್ಯಾಪಿ 2 ದಿನದ ಬ್ಯಾಂಕ್ ಮುಷ್ಕರ

ಖಾಸಗೀಕರಣ ವಿರೋಧಿಸಿ ದೇಶವ್ಯಾಪಿ 2 ದಿನದ ಬ್ಯಾಂಕ್ ಮುಷ್ಕರ - Janathavaniದಾವಣಗೆರೆ, ಮಾ.9 – ಕೇಂದ್ರ ಸರಕಾರ ಇತ್ತೀಚಿಗೆ ಮಂಡಿಸಿದ ಬಜೆಟ್‌ನಲ್ಲಿ ಬ್ಯಾಂಕ್ ಖಾಸಗೀಕರಣದ ಪ್ರಸ್ತಾಪವನ್ನು ವಿರೋಧಿಸಿ ದೇಶವ್ಯಾಪಿ ಎರಡು ದಿನಗಳ ಬ್ಯಾಂಕ್ ಮುಷ್ಕರವನ್ನು ನಡೆಸಲಾಗುವುದು ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ರಾಘವೇಂದ್ರ ನಾಯರಿ‌ ತಿಳಿಸಿದ್ದಾರೆ. 

ದೇಶ ವಿರೋಧಿ ಮತ್ತು ಜನ ವಿರೋಧಿಯಾದ ಈ ಪ್ರಸ್ತಾಪಗಳನ್ನು ಖಂಡಿಸಿ ಬ್ಯಾಂಕ್ ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆಯು (UFBU) ಮಾರ್ಚ್ 15 ಮತ್ತು 16 ರಂದು 2 ದಿನಗಳ ಅಖಿಲ ಭಾರತ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿದೆ. ಈ ಮುಷ್ಕರದಲ್ಲಿ‌ ಬ್ಯಾಂಕ್ ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆಯ ಎಲ್ಲಾ 9 ಸಂಘಟನೆಗಳ ಮತ್ತು ಗ್ರಾಮೀಣ ಬ್ಯಾಂಕ್‌ಗಳ ಸಂಘಟನೆಗಳ ಸುಮಾರು 10 ಲಕ್ಷ ಬ್ಯಾಂಕ್ ಉದ್ಯೋಗಿಗಳು ಪಾಲ್ಗೊಳ್ಳಲಿದ್ದಾರೆ‌.

ಬ್ಯಾಂಕ್ ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆಯ ಎಲ್ಲಾ ಸದಸ್ಯರು, ಗ್ರಾಮೀಣ ಬ್ಯಾಂಕ್ ಉದ್ಯೋಗಿಗಳು, ನಿವೃತ್ತ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟದ ಸದಸ್ಯರು ಹಾಗೂ ಸಾರ್ವಜನಿಕರು ಮುಷ್ಕರದ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸರಕಾರದ ಬ್ಯಾಂಕ್ ಖಾಸಗೀಕರಣದ ನಡೆಯನ್ನು ಹಿಮ್ಮೆಟ್ಟಿಸಬೇಕಾಗಿ ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಕಾರ್ಯದರ್ಶಿ ಹೆಚ್.ಎಸ್.ತಿಪ್ಪೇಸ್ವಾಮಿ ತಿಳಿಸಿದ್ದಾರೆ.

error: Content is protected !!