ದಾವಣಗೆರೆ, ಜು.24 – ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ನಗರದ ಲಲಿತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಮತ್ತು ಪ್ರಥಮ ಪಿಯುಸಿ ಆಧಾರದ ಮೇಲೆ ಉತ್ತಮ ಅಂಕ ಪಡೆದು ಸಾಧನೆ ಮಾಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಉನ್ನತ ಶ್ರೇಣಿಯಲ್ಲಿ 16, ಪ್ರಥಮ ಶ್ರೇಣಿಯಲ್ಲಿ 11, ದ್ವಿತೀಯ ಶ್ರೇಣಿಯಲ್ಲಿ 01 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ವಿಜ್ಞಾನ ವಿಭಾಗದ ಕು. ಹರ್ಷಿತಾ 596 ಮತ್ತು ಕು. ಅನನ್ಯ ವಿ. 595 ಅಂಕ ಪಡೆದು ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ಎಲ್ಲಾ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.
December 26, 2024