ಹರಪನಹಳ್ಳಿ, ಮೇ 23- ಗಡಿ ಭದ್ರತಾ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತಾಲ್ಲೂಕಿನ ಕಸವನಹಳ್ಳಿಯ ಯೋಧ ಬಂಡೇರ ವಸಂತಕುಮಾರ್ ಅವರು ಕಿಡ್ನಿ ವೈಫಲ್ಯದಿಂದಾಗಿ ನಿಧನರಾಗಿದ್ದಾರೆ. ವಸಂತಕುಮಾರ್ ಯಲಹಂಕದಲ್ಲಿ ಕರ್ತವ್ಯ ನಿರ್ವ ಹಿಸುತ್ತಿದ್ದು, ಅನಾರೋಗ್ಯದ ಹಿನ್ನೆಲೆಯಲ್ಲಿ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದರು. ದಾವಣಗೆರೆ ಎಸ್.ಎಸ್. ಆಸ್ವತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತರು ತಂದೆ, ತಾಯಿ, ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದು, ಮೃತರ ಅಂತ್ಯಕ್ರಿಯೆ ಭಾನುವಾರ ಮಧ್ಯಾಹ್ನ ಕಸವನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದ ಹತ್ತಿರ ಸಕಲ ಸರ್ಕಾರಿ ಗೌರವದೊಂದಿಗೆ ಜರುಗಿತು.
ಸಂತಾಪ : ಯೋಧ ಬಂಡೇರ ವಸಂತಕುಮಾರ್ ನಿಧನಕ್ಕೆ ಶಾಸಕ ಎಸ್.ವಿ. ರಾಮಚಂದ್ರಪ್ಪ, ಸಂಸದ ವೈ.ದೇವೇಂದ್ರಪ್ಪ, ತಾಲ್ಲೂಕು ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಕೆ. ಉಚ್ಚೆಂಗೆಪ್ಪ ಅವರುಗಳು ಸಂತಾಪ ವ್ಯಕ್ತಪಡಿಸಿದ್ದಾರೆ.