ಹರಿಹರ, ಮೇ 23- ನಗರದ ಹೊರವಲಯದಲ್ಲಿರುವ ಬೆಳ್ಳೂಡಿ ಕಾರ್ಗಿಲ್ ಕಾರ್ಖಾನೆಯ ಸುಮಾರು 30 ಕಾರ್ಮಿಕರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿರುವುದರಿಂದ ಒಂದು ತಿಂಗಳ ಕಾಲ ಕಾರ್ಖಾನೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಮ್ಯಾನೇಜರ್ ಕವನ ತಿಳಿಸಿದ್ದಾರೆ.
ಕಾರ್ಗಿಲ್ ಕಂಪನಿಯು ಆಹಾರಕ್ಕೆ ಉಪಯುಕ್ತವಾದ ಪದಾರ್ಥಗಳನ್ನು ತಯಾರಿಸುವುದರಿಂದ ಇಲ್ಲಿನ ಸುಮಾರು 450 ಕಾರ್ಮಿಕರಿಗೆ ಕೊರೊನಾ ತಪಾಸಣೆ ಮಾಡಿಸಲಾಗಿದೆ. ಅದರಲ್ಲಿ 30 ಕಾರ್ಮಿಕರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಕೊರೊನಾ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಇರುವುದರಿಂದ ಅದು ಮುಂದೆ ದೊಡ್ಡ ಪ್ರಮಾಣದಲ್ಲಿ ಅನಾಹುತಕ್ಕೆ ಎಡೆಮಾಡಿಕೊಡುತ್ತದೆ ಎಂಬುದನ್ನು ಅರಿತುಕೊಂಡು ಕಾರ್ಖಾನೆಯ ಎಲ್ಲಾ ಕೆಲಸಗಳನ್ನು ಸ್ಥಗಿತಗೊಳಿಸಲಾಗಿದೆ.
ಕಾರ್ಗಿಲ್ ಕಂಪನಿಯಲ್ಲಿ ಕಾರ್ಖಾನೆಯ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಈಗ ಕೊರೊನಾ ಪಾಸಿಟಿವ್ ಬಂದಿರುವವರಲ್ಲಿ ಕೆಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಉಳಿದವರು ಹೋಮ್ ಐಸೋಲೇಷನ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದರು.