ಮಲೇಬೆನ್ನೂರು, ಆ.4- ರಾಜ್ಯದಲ್ಲಿ ಪರಿಶಿಷ್ಟ ಪಂಗಡ ಸಮುದಾಯದ ಬಹುದಿನಗಳ ಬೇಡಿಕೆಯಂತೆ ಎಸ್ಟಿಪಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಪೂರಕವಾಗಿ ಪ್ರತ್ಯೇಕ ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವಾಲಯ ಸ್ಥಾಪನೆಗೆ ಇಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನ ಗೊಂಡಿರುವುದನ್ನು ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಸ್ವಾಗತಿಸಿದ್ದಾರೆ.
2020ರ ಫೆಬ್ರವರಿ 9 ರಂದು ರಾಜನಹಳ್ಳಿ ಮಠದಲ್ಲಿ ಜರುಗಿದ 2ನೇ ವರ್ಷದ ವಾಲ್ಮೀಕಿ ಜಾತ್ರೆಯಲ್ಲಿ ಅಂದು ಸಿಎಂ ಆಗಿದ್ದ ಯಡಿಯೂರಪ್ಪ ಅವರು ಎಸ್ಟಿ ಜನಾಂಗದ ಶ್ರೇಯೋಭಿವೃದ್ಧಿಗೆ ಮತ್ತು ಕುಂದುಕೊರತೆಗಳನ್ನು ಪರಿಹರಿಸಲು ಪ್ರತ್ಯೇಕ ಸಚಿವಾಲಯವನ್ನು ಪ್ರಾರಂಭಿಸುವುದಾಗಿ ಘೋಷಣೆ ಮಾಡಿ, 2020-21ನೇ ಆಯವ್ಯಯದಲ್ಲಿ ಸೇರಿಸಲು ಆದೇಶಿಸಿದ್ದರು.
ಆದಷ್ಟು ಬೇಗ ಎಸ್ಟಿ ಮೀಸಲಾತಿಯನ್ನೂ ಶೇ. 7.5 ಕ್ಕೆ ಹೆಚ್ಚಿಸುವಂತೆ ಶ್ರೀಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ.