ದಾವಣಗೆರೆ, ಆ.4- ಹಿಂದುಳಿದ ವರ್ಗಗಳಿಗೆ ಸೇರಿದ ಕಾನೂನು ಪದವೀಧರರಿಗೆ ಈ ಸಾಲಿನ ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಅರ್ಹ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ 46, ಎರಡನೇ ಮಹಡಿ, ಜಿಲ್ಲಾಡಳಿತ ಭವನ, ಕರೂರು ರಸ್ತೆ, ದಾವಣಗೆರೆ-577006, ಇಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಆಗಸ್ಟ್ 21 ರೊಳಗೆ ಕಚೇರಿಗೆ ಸಲ್ಲಿಸಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.