ದಾವಣಗೆರೆ, ಮಾ.21- ಮಹಾನಗರ ಪಾಲಿಕೆಯ ವಾರ್ಡ್ ನಂ.20 ಮತ್ತು 22 ರಲ್ಲಿ ರಾಜೀನಾಮೆಯಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲಾಗುತ್ತಿದ್ದು, 2 ಸ್ಥಾನಗಳಿಗೆ ಒಟ್ಟು 7 ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿದಂತಾಗಿದೆ.
ವಾರ್ಡ್ ಸಂಖ್ಯೆ 20 ರಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳು ಸೇರಿದಂತೆ ಒಟ್ಟು 2 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.
ವಾರ್ಡ್ ಸಂಖ್ಯೆ 22 ರಲ್ಲಿ ಅಭ್ಯರ್ಥಿಗಳು ಕಾಂಗ್ರೆಸ್-1, ಬಿಜೆಪಿ-1, ಎ.ಐ.ಎಂ.ಇ.ಐ.ಎಂ-1, ಪಕ್ಷೇತರ-2 ಸೇರಿದಂತೆ, ಒಟ್ಟು 5 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮತದಾನ ಮಾ. 29 ರಂದು ಬೆಳಿಗ್ಗೆ 7 ರಿಂದ ಸಂಜೆ 5 ರವರೆಗೆ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.