ಆಡಳಿತದಲ್ಲಿ ಸಿಎಂ ಪುತ್ರ ವಿಜಯೇಂದ್ರ ಹಸ್ತಕ್ಷೇಪ ಶುದ್ಧ ಸುಳ್ಳು

ಸಂಸದ ಜಿ.ಎಂ.ಸಿದ್ದೇಶ್ವರ

ದಾವಣಗೆರೆ, ಜೂ.21- ಭದ್ರಾ ಮೇಲ್ದಂಡೆ ಯೋಜನೆ ಟೆಂಡರ್‌ನಲ್ಲಿ ಕಿಕ್ ಬ್ಯಾಕ್ ಪಡೆಯ ಲಾಗಿದೆ ಎಂಬ ಆರೋಪ ಸರಿಯಲ್ಲ. ಮುಖ್ಯ ಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜ ಯೇಂದ್ರ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬುದು ಶುದ್ಧ ಸುಳ್ಳು. ಕೇವಲ ಆರೋಪ ಮಾಡಿದಾಕ್ಷಣ ಎಲ್ಲವೂ ಆಗದು. ಸಾಕ್ಷ್ಯ ಇರಬೇಕು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.

ನಗರದ ವರದಿಗಾರರ ಕೂಟದ ಕಚೇರಿಯಲ್ಲಿ   ಪತ್ರಿಕಾ ಏಜೆಂಟರು, ವಿತರಕರಿಗೆ ಇಂದು ಹಮ್ಮಿಕೊಂಡಿದ್ದ ಲಸಿಕಾ ಶಿಬಿರಕ್ಕೆ ಭೇಟಿ ನೀಡಿದ್ದ ವೇಳೆ ಮಾಧ್ಯಮದವರ ಜೊತೆ ಅವರು ಮಾತನಾಡಿದರು.

ಹೆಚ್. ವಿಶ್ವನಾಥ್, ಬಸನಗೌಡ ಪಾಟೀಲ್ ಯತ್ನಾಳ್ ಯಾಕೆ ಮಾತನಾಡುತ್ತಾರೆ ಎಂಬುದು ಎಲ್ಲರಿಗೂ ಗೊತ್ತು. ವಿಶ್ವನಾಥ್‍ಗೆ ಬಿಜೆಪಿ ರಾಷ್ಟ್ರೀಯ ನಾಯಕರು ಹಾಗೂ ರಾಜ್ಯಾಧ್ಯಕ್ಷರು ಬುದ್ದಿ ಹೇಳುತ್ತಾರೆ. ನಮ್ಮ ಪಕ್ಷಕ್ಕೆ ಬಂದಿದ್ದಾರೆ. ಆದ್ರೆ ವಿನಾಕಾರಣ ಆರೋಪ ಮಾಡುವುದು ಸರಿಯಲ್ಲ ಎಂದರು.

ಪದೇ ಪದೇ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡದಂತೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹಾಗೂ ಕೇಂದ್ರದ ನಾಯಕರು ಸೂಚನೆ ನೀಡಿದ್ದಾರೆ. ಈ ವಿಚಾರದಲ್ಲಿ ಮಾತ ನಾಡಲ್ಲ. ಯಡಿಯೂರಪ್ಪ ಅವರೇ ಇನ್ನು ಎರಡು ವರ್ಷ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದರು.

ಯಾರೋ ಇಬ್ಬರು ಮೂವರು ಯಡಿ ಯೂರಪ್ಪ ವಿರುದ್ಧ ಅಪಸ್ವರ ಎತ್ತಿರಬಹುದು. ಉಳಿದೆಲ್ಲಾ ಶಾಸಕರು ಸಿಎಂ ಪರವೇ ಇದ್ದಾರೆ. ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಸಿದ್ದೇಶ್ವರ ಸ್ಪಷ್ಟಪಡಿಸಿದರು. 

ಡಿಸೆಂಬರ್ ಒಳಗೆ ಎಲ್ಲರಿಗೂ ಲಸಿಕೆ ಗುರಿ:  ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಳ್ಳಿ‌. ಕೆಲವರು ಅಪಪ್ರಚಾರ ನಡೆಸುತ್ತಿದ್ದಾರೆ. ಇದಕ್ಕೆ ಯಾರೂ ತಲೆಕೆಡಿಸಿಕೊಳ್ಳಬೇಡಿ. ಇಂದಿನಿಂದ ಎಲ್ಲರಿಗೂ ಲಸಿಕೆ ನೀಡಲಾಗುವುದು. 

28 ಸಾವಿರ ಲಸಿಕೆಗಳು ಬಂದಿದ್ದು, ಕೊರತೆ ಇಲ್ಲ. ಡಿಸೆಂಬರ್ ಒಳಗೆ ಎಲ್ಲರಿಗೂ ಲಸಿಕೆ ನೀಡುವ ಗುರಿ ಹೊಂದಲಾಗಿದ್ದು, ಯಶಸ್ವಿಯಾ ಗುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

error: Content is protected !!