ದಾವಣಗೆರೆ, ಮಾ.25- ಡಾ.ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಪ್ರಯುಕ್ತ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಶ್ರೇಯೋಭಿವೃದ್ದಿಗೆ ಶ್ರಮಿಸಿದ ಅರ್ಹ ವ್ಯಕ್ತಿಗಳಿಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ, ದಾವಣಗೆರೆ (ರೂಂ ನಂ:37, ಜಿಲ್ಲಾಡಳಿತ ಭವನ) ಇಲ್ಲಿ ಅರ್ಜಿ ಪಡೆದು ಮಾ. 30ರೊಳಗೆ ಸಲ್ಲಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ರೇಷ್ಮಾ ಕೌಸರ್ ತಿಳಿಸಿದ್ದಾರೆ.
January 4, 2025