ದಾವಣಗೆರೆ, ಮಾ.28- ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರೂ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಡಾ. ಮುಖ್ಯಮಂತ್ರಿ ಚಂದ್ರು ಅವರು `ಸಿದ್ಧಗಂಗಾ ಸಿರಿ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಪೂರ್ಣಚಂದ್ರ ರಂಗಮಂದಿರದಲ್ಲಿ ಬೆಂಗಳೂರು ನಗರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಹಾಗೂ ಇತರೆ ಸಂಘ, ಸಂಸ್ಥೆಗಳು ಆಯೋಜಿಸಿರುವ
ಡಾ. ಶಿವಕುಮಾರ ಮಹಾಸ್ವಾಮಿಗಳವರ ಜಯಂತಿ ಕಾರ್ಯಕ್ರಮದಲ್ಲಿ ಚಂದ್ರು ಅವರಿಗೆ
`ಶ್ರೀ ಸಿದ್ಧಗಂಗಾ ಸಿರಿ’ ಪ್ರಶಸ್ತಿ ಪ್ರದಾನ ಮಾಡಲಾಗುವುದು.