ದಾವಣಗೆರೆ, ಮಾ.28- ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವುದಾಗಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಸಂಗಮೇಶ ಬಾದವಾಡಗಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ತಾವು ಅಧ್ಯಕ್ಷರಾದರೆ, ಗ್ರಾಮೀಣ ಮಟ್ಟಕ್ಕೂ ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ವಿಸ್ತರಿಸುವುದು, ತಾಲ್ಲೂಕು ಮತ್ತು ಹೋಬಳಿ ಮಟ್ಟದಲ್ಲಿ ಕನ್ನಡ ಭವನಗಳನ್ನು ನಿರ್ಮಿಸಲು ಮುಂದಾಗು ವುದಾಗಿ ಹೇಳಿದರು.
ಪರಿಷತ್ತಿಗೆ ಯುವ ಸದಸ್ಯರನ್ನು ಸೆಳೆಯಲು ಕ್ರಮ ಕೈಗೊಳ್ಳುತ್ತೇನೆ. ಅನ್ಯ ಭಾಷಿಗರಿಗೆ ಕನ್ನಡ ಕಲಿಸುವ ಕಲಿಕಾ ಕೇಂದ್ರಗಳನ್ನು ಆರಂಭಿಸ ಲಾಗುವುದು. ಪರಿಷತ್ನ ಚುನಾವಣಾ ವೆಚ್ಚಗಳನ್ನು ಕಡಿತ ಗೊಳಿಸಲು ಚಿಂತಿಸುವುದಾಗಿ ಹೇಳಿದರು. ಶರಣಸಬಪ್ಪ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.