ಹಬ್ಬ ಆಚರಣೆ : ಸಾರ್ವಜನಿಕ ಚಟುವಟಿಕೆಗಳಿಗೆ ನಿಷೇಧ

ದಾವಣಗೆರೆ, ಮಾ.27- ಕೋವಿಡ್-19 ಎರಡನೇ ಅಲೆ ವ್ಯಾಪಕ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಬರುವ ಯಾವುದೇ ಹಬ್ಬ, ಆಚರಣೆಗಳ ಪ್ರಯುಕ್ತ ನಡೆಸಬಹುದಾದ ಸಭೆ-ಸಮಾರಂಭಗಳು ಸೇರಿದಂತೆ ಸಾರ್ವಜನಿಕರು ಸೇರಬಹುದಾದ ಇತರೆ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.

ಹೋಳಿ ಹಬ್ಬ, ಷಬ್-ಎ-ಬರಾತ್, ಗುಡ್ ಫ್ರೈಡೇ ಸೇರಿದಂತೆ ಇತ್ಯಾದಿ ಹಬ್ಬಗಳ ಸಂದರ್ಭದಲ್ಲಿ ನಡೆಯಬಹುದಾದ ಸಮಾರಂಭಗಳು, ಆಚರಣೆಗಳು ಹಾಗೂ ಸಾರ್ವಜನಿಕರು ಗುಂಪು ಸೇರಬಹುದಾದ ಇತರೆ ಚಟುವಟಿಕೆಗಳು ಸೋಂಕು ಹರಡುವಿಕೆಯನ್ನು ಹೆಚ್ಚಿಸಬಹುದಾದ ಆತಂಕ ವಿದ್ದು, ಇಲ್ಲಿಯವರೆಗೂ ಕೋವಿಡ್-19ರ ಹರಡುವಿಕೆಯ ನಿಯಂತ್ರಣದಲ್ಲಿ ಈವರೆಗೆ ಸಾಧಿಸಲಾಗಿರುವ ಲಾಭಕ್ಕೆ ಹಿನ್ನಡೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ.  ಈ ನಿಟ್ಟಿನಲ್ಲಿ ಮುಂಬರುವ ಹಬ್ಬಗಳ ಸಂದರ್ಭದಲ್ಲಿ ಮೈದಾನ, ಉದ್ಯಾನವನ, ಮಾರುಕಟ್ಟೆಗಳು, ಧಾರ್ಮಿಕ ಪ್ರದೇಶಗಳು ಇತ್ಯಾದಿ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ರೀತಿಯ ಆಚರಣೆಗಳು, ಸಭೆ-ಸಮಾರಂಭಗಳನ್ನು ಆಚರಿಸಬಾರದು. 

ಹಬ್ಬದ ಪ್ರಯುಕ್ತ ಹಮ್ಮಿಕೊಂಡಿರುವ ನಿಯಮಗಳನ್ನು ಸಾರ್ವಜನಿ ಕರು ನಿರ್ಲಕ್ಷಿಸಿದರೆ ಅಂತಹವರ ವಿರುದ್ಧ ಕಾನೂನಾತ್ಮಕವಾಗಿ ಕ್ರಮ ತೆಗೆದು ಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಆದೇಶಿಸಿದ್ದಾರೆ.

error: Content is protected !!