ದಾವಣಗೆರೆ, ಆ.30- ಚನ್ನಗಿರಿ ತಾಲ್ಲೂಕಿನ ದಾಗಿನಕಟ್ಟೆ-ಯಲೋದಳ್ಳಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆಯ ಯಶಸ್ವೀ ಕಾರ್ಯಾಚರಣೆಗೆ ಸೆರೆ ಸಿಕ್ಕಿದೆ.
ದಾಗಿನಕಟ್ಟೆ ಹಾಗೂ ಯಲೋದಹಳ್ಳಿ ಗ್ರಾಮಗಳ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಭಾನುವಾರ ರಾತ್ರಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿನಲ್ಲಿ ಸೆರೆಯಾಗಿದೆ.
ಇದೇ 24ರ ರಾತ್ರಿ ವೇಳೆ ಗ್ರಾಮದ ಬಳಿಯೇ ಇರುವ ಪಂಪ್ ಹೌಸ್ ಹತ್ತಿರ ಈ ಚಿರತೆ ಪ್ರತ್ಯಕ್ಷವಾಗಿತ್ತು. ಕಳೆದ ಒಂದು ವಾರದಿಂದ ಗ್ರಾಮದ ಸುತ್ತ ಮುತ್ತ ಓಡಾಡಿಕೊಂಡು ಜನರ ನಿದ್ದೆಗೆಡಿಸಿತ್ತು.
ಈ ಸಂಬಂಧ ಅರಣ್ಯ ಇಲಾಖೆ ಎರಡು ದಿನಗಳ ಹಿಂದೆ ಚಿರತೆ ಸೆರೆಗೆ ಬೋನ್ ಇಟ್ಟು ಕಾರ್ಯಾಚರಣೆ ಶುರು ಮಾಡಿತ್ತು. ಕೊನೆಗೂ ಚಿರತೆ ಬೋನಿಗೆ ಬಿದ್ದಿದೆ. ಅರಣ್ಯ ಇಲಾಖೆ ಚಿರತೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಕಳೆದ 4 ದಿನಗಳಿಂದ ಪ್ರತ್ಯಕ್ಷವಾಗುತ್ತಿದ್ದ ಚಿರತೆಯಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿತ್ತು. ಚಿರತೆ ಕಾಣಿಸಿಕೊಂಡಿದ್ದರಿಂದ ಜಮೀನುಗಳಿಗೆ ತೆರಳಲು ರೈತರು ಭಯಭೀತರಾಗಿದ್ದರು. ಚಿರತೆ ಸಿಕ್ಕ ಮೇಲೆ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.