ಬೆಂಬಲ ಯೋಜನೆಯಡಿ ಖರೀದಿ ಕೇಂದ್ರ ಆರಂಭ

ಖರೀದಿ ಪ್ರಕ್ರಿಯೆ ವಿಸ್ತರಣೆ

ದಾವಣಗೆರೆ ಜೂ.12- 2019-20ನೇ ಸಾಲಿನ ಮುಂಗಾರು ಮತ್ತು 2020-21ನೇ ಸಾಲಿನ ಹಿಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಜಿಲ್ಲೆಯ ರೈತರು ಬೆಳೆದ ಉತ್ತಮ ಗುಣಮಟ್ಟದ (ಎಫ್.ಎ.ಕ್ಯೂ.) ಭತ್ತವನ್ನು ರೈತರಿಂದ ನೇರವಾಗಿ ನೋಂದಾಯಿತ ಅಕ್ಕಿ ಗಿರಣಿಗಳ ಮೂಲಕ ಖರೀದಿಸಲು ಸರ್ಕಾರ ಜಿಲ್ಲೆಗೆ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವನ್ನು ಖರೀದಿ ಏಜೆನ್ಸಿಯಾಗಿ ನೇಮಕ ಮಾಡಿ ಆದೇಶಿಸಿದೆ.

ಜಿಲ್ಲಾಧಿಕಾರಿಗಳ ನೇತೃತ್ವದ ಜಿಲ್ಲಾ ಟಾಸ್ಕ್‍ಫೋರ್ಸ್ ಸಮಿತಿ ತೀರ್ಮಾನದಂತೆ ಉತ್ತಮ ಗುಣಮಟ್ಟದ ಭತ್ತವನ್ನು ರೈತರಿಂದ ತಾಲ್ಲೂಕುಗಳ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗ ಣದಲ್ಲಿನ ಖರೀದಿ ಕೇಂದ್ರಗಳಲ್ಲಿ ಗುಣಮಟ್ಟ ಪರಿಶೀಲಿಸಿ, ನಂತರ ರೈತರಿಗೆ ಸಮೀಪವಿರುವ ಅಕ್ಕಿ ಗಿರಣಿಗಳಲ್ಲಿ ಖರೀದಿಸಲಾಗುವುದು. ಖರೀದಿ ಪ್ರಕ್ರಿಯೆಯು ಮೇ 31 ಕ್ಕೆ ಅಂತ್ಯಗೊಂ ಡಿದ್ದು, ಆದರೆ ಸರ್ಕಾರದ ಆದೇಶದಂತೆ ಖರೀದಿ ಪ್ರಕ್ರಿಯೆಯನ್ನು ಜೂ. 30 ರವರೆಗೆ ಮುಂದುವ ರೆಸಲಾಗುತ್ತದೆ ಎಂದು ತಿಳಿಯಪಡಿಸಿದೆ.

ದಾವಣಗೆರೆಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣ, ಹರಿಹರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣ ಹಾಗೂ ಹೊನ್ನಾಳಿ ಟಿ.ಎ.ಪಿ.ಸಿ.ಎಂ.ಎಸ್. ಪ್ರಾಂಗಣದಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ರೈತರು ಈ ಖರೀದಿ ಕೇಂದ್ರಗಳ ಪ್ರಯೋಜನ   ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಟಾಸ್ಕ್‍ಫೋರ್ಸ್ ಸಮಿತಿಯ ಅಧ್ಯಕ್ಷ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!