ಮುಸುಕಿನ ಜೋಳ ಬೆಳೆದ ರೈತರಿಗೆ ಐದು ಸಾವಿರ ನೆರವು

ಹೊನ್ನಾಳಿ, ಜೂ.14- ಈ ಸಾಲಿನಲ್ಲಿ ಮುಸುಕಿನ ಜೋಳ ಬೆಳೆದ ರೈತರಿಗೆ ಕೋವಿ ಡ್-19 ಸಂಕಷ್ಟಕ್ಕೆ ಒಳಗಾಗಿರುವ ಹಿನ್ನೆಲೆ ಯಲ್ಲಿ 5,000 ರೂ. ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆ ಮುಖಾಂತರ ವರ್ಗಾಯಿ ಸಲು ಸರ್ಕಾರ ತೀರ್ಮಾನಿಸಿದ್ದು  ಹೊನ್ನಾಳಿ, ನ್ಯಾಮತಿ ತಾಲ್ಲೂಕಿನಲ್ಲಿ ಮುಸುಕಿನ ಜೋಳ ಬೆಳೆದ ರೈತರಿಗೆ ಅನುಕೂಲ ಆಗಲಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಮುಸುಕಿನ ಜೋಳ ಬೆಳೆದ ರೈತರಿಗೆ ಬೆಳೆ ಸಮೀಕ್ಷೆ ತಂತ್ರಾಂಶದಲ್ಲಿ ಈಗ ದಾಖಲಾಗಿರುವ ಬೆಳೆ ವಿವರಗಳ ಆಧಾರದ ಮೇಲೆ ಪಾವತಿಸಲು ಕ್ರಮ ವಹಿಸಲಾಗಿದೆ. ಬೆಳೆ ಸಮೀಕ್ಷೆಯಲ್ಲಿ ಇರುವಂತೆ ಮುಸುಕಿನ ಜೋಳ ಬೆಳೆಗಾರರ ಪಟ್ಟಿಯನ್ನು ಗ್ರಾಮ ಪಂಚಾಯ್ತಿ ರೈತ ಸಂಪರ್ಕ ಕೇಂದ್ರ ಹಾಗೂ ತಾಲ್ಲೂಕು ಕಚೇರಿಯ ನಾಮಫಲಕದಲ್ಲಿ ಪ್ರದರ್ಶಿಸಲಾಗಿದೆ.

ಕೃಷಿ, ಕಂದಾಯ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಸಮಿತಿ ರಚನೆಯಾಗಿದ್ದು, ಹೋಬಳಿ ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದೆ. ಪಟ್ಟಿಯಲ್ಲಿ ಹೆಸರು ಇರದ ಫಲಾನು ಭವಿಗಳು 15 ದಿವಸದೊಳಗೆ (ದಾಖಲಾ ತಿಗಳೊಂದಿಗೆ) ಆಕ್ಷೇಪಣೆ ಸಲ್ಲಿಸಬೇಕು. ನೇರವಾಗಿ ಗ್ರಾಮ ಲೆಕ್ಕಿಗರು, ರೈತ ಸಂಪರ್ಕ ಕೇಂದ್ರಗಳಲ್ಲಿ ಆಕ್ಷೇಪಣೆ ಸಲ್ಲಿಸಬಹುದು. ಜಂಟಿ ಖಾತೆಯಾಗಿದ್ದಲ್ಲಿ ಇತರೆ ಖಾತೆದಾರರ ಒಪ್ಪಿಗೆ ಪತ್ರ ಪಡೆದು ಒಬ್ಬರ ಹೆಸರಿನಲ್ಲಿ ಅರ್ಜಿ ಸಲ್ಲಿಸುವಂತೆ  ನಿರ್ದೇಶಕರು ತಿಳಿಸಿದ್ದಾರೆ.

error: Content is protected !!