ಲಾಕ್‍ಡೌನ್ ಉಲ್ಲಂಘನೆ: ಶಾಸಕ ಪಿ.ಟಿ.ಪಿ ವಿರುದ್ಧ ಎಫ್‌ಐಆರ್

ಹರಪನಹಳ್ಳಿ, ಜೂ.15- ಲಾಕ್‍ಡೌನ್ ನಿಯಮ ಉಲ್ಲಂಘನೆ ಮಾಡಿದ ಆರೋಪದಡಿ ಹಡಗಲಿ ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ್ ವಿರುದ್ಧ ಬಳ್ಳಾರಿ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.

ಶಾಸಕರ ಪುತ್ರನ ಮದುವೆಗೆ ಯಾವುದೇ ರೀತಿಯ ಅನುಮತಿ ಕೇಳಿರಲಿಲ್ಲ. ಕಾರ್ಯಕ್ರಮದಲ್ಲಿ ಕೋವಿಡ್ ಲಾಕ್‍ಡೌನ್ ನಿಯಮಗಳ ಉಲ್ಲಂಘನೆ ಮಾಡಿರುವುದು ಸ್ಪಷ್ಟವಾಗಿದೆ. ನಿಯಮಾವಳಿ ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಬಳ್ಳಾರಿ ಡಿಸಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ.

ಲಕ್ಷ್ಮೀಪುರ ಗ್ರಾಮದ ಕೈಗಾರಿಕಾ ತರಬೇತಿ ಸಂಸ್ಥೆಯ ವಿಶಾಲವಾದ ಮೈದಾನದಲ್ಲಿ  ಪರಮೇಶ್ವರ್ ನಾಯ್ಕ್ ಅವರ ಮಗ ಅವಿನಾಶ್  ವಿವಾಹ ಕಾರ್ಯಕ್ರಮ ಆ ಯೋಜಿಸಲಾಗಿತ್ತು. ಸಾವಿರಾರು ಜನರು ಭಾಗಿಯಾಗಿ ದ್ದರು. ಮಾಜಿ ಮುಖ್ಯ ಮಂತ್ರಿ
ಸಿದ್ದರಾಮಯ್ಯ, ಆರೋಗ್ಯ ಸಚಿವ ಶ್ರೀರಾಮುಲು, ಅರಣ್ಯ ಸಚಿವ ಆನಂದ್‌ಸಿಂಗ್, ಕೆಪಿಸಿಸಿ ಮಾಜಿ ಅಧ್ಯಕ್ಷ ಜಿ.ಪರಮೇಶ್ವರ, ಬಳ್ಳಾರಿ ಸಂಸದ ವೈ.ದೇವೇಂದ್ರಪ್ಪ,  ಕೆಪಿಸಿಸಿ ಕಾರ್ಯಾಧ್ಯಕ್ಷ  ಸಲೀಂ ಅಹ್ಮದ್‌, ಸತೀಶ್‌ ಜಾರಕಿಹೊಳಿ, ಮಾಜಿ ಸಂಸದ ವಿ.ಎಸ್ .ಉಗ್ರಪ್ಪ, ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್‌, ಅನೇಕ ಶಾಸಕರುಗಳು ಆಗಮಿಸಿ ವಧು-ವರರಿಗೆ ಶುಭ ಕೋರಿದರು. ಈ ವೇಳೆ ಸಚಿವರು ಹಾಗೂ ರಾಜಕೀಯ ನಾಯಕರು ಸಹ ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ. ಬಹುತೇಕರು ಮಾಸ್ಕ್ ಧರಿಸಿರಲಿಲ್ಲ.

ಈ ಕುರಿತು ಶಾಸಕ ಪರಮೇಶ್ವರ ನಾಯ್ಕ್ ಸಹ ಪ್ರತಿಕ್ರಿಯೆ ನೀಡಿದ್ದು, ನನ್ನ ಮಗನ ಮದುವೆಗೆ ಕಡಿಮೆ ಜನರು ಬನ್ನಿ ಎಂದು ವಿನಂತಿಸಿಕೊಂಡಿದ್ದೆ. ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಲಾಗಿತ್ತು. ಆದರೆ, ನಿರೀಕ್ಷೆಗೂ ಮೀರಿ ಜನ ಬಂದ ಕಾರಣ ಸ್ವಲ್ಪ ತೊಂದರೆಯಾಗಿದೆ ಎಂದರು.

error: Content is protected !!