ಅಂಧ ಮಕ್ಕಳ ಪರೀಕ್ಷೆ ನೋಡಿ ನನ್ನ ಆತ್ಮ ವಿಶ್ವಾಸ ಹೆಚ್ಚಿದೆ : ಡಿಸಿ

ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ:  ಪರಿಶೀಲನೆ

ದಾವಣಗೆರೆ, ಜೂ.27- ಅಂಧ ಹಾಗೂ ಮೂಗ ಮಕ್ಕಳು ಪರೀಕ್ಷೆ ಬರೆಯುವ ಪರಿ ನೋಡಿ ನನ್ನ ಆತ್ಮವಿಶ್ವಾಸ ಹೆಚ್ಚಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಾದ  ಸರ್ಕಾರಿ ಹೈಸ್ಕೂಲ್ ಮೈದಾನ ಮತ್ತು ಸಿದ್ದಗಂಗಾ, ಗೋಪನಾಳ್, ಬಾತಿ ಗ್ರಾಮದ ಶಾಲೆಗಳಿಗೆ  ಭೇಟಿ ನೀಡಿ ಪರಿಶೀಲಿಸಿದ ನಂತರ ಪತ್ರಕರ್ತ ರೊಂದಿಗೆ ಅವರು ಮಾತನಾಡಿದರು.

ಎಸ್.ಎಸ್.ಎಲ್.ಸಿ ಗಣಿತ ವಿಷಯ ಪರೀಕ್ಷೆ ಪ್ರಾರಂಭ ವಾಗಿದ್ದು ಜಿಲ್ಲೆಯಲ್ಲಿ ಒಟ್ಟು 93 ಪರೀಕ್ಷಾ ಕೇಂದ್ರಗಳಿವೆ. 

ಸಾಮಾಜಿಕ ಅಂತರ ಕಾಪಾಡಿಕೊಂಡು ಯಾವುದೇ ರೀತಿಯ ಗೊಂದಲ ಆಗದಂತೆ ವಿದ್ಯಾರ್ಥಿಗಳನ್ನು ಒಳಗೆ ಕಳುಹಿಸಿ ಕೂರಿಸುವ ವ್ಯವಸ್ಥೆ ಮಾಡಲಾಗಿದೆ.  ಪ್ರತಿ ವಿದ್ಯಾರ್ಥಿಗೂ ಥರ್ಮಲ್ ಸ್ಕ್ಯಾನಿಂಗ್ ಮಾಡಲಾಗಿದೆ. ವಿದ್ಯಾರ್ಥಿಗಳು ತುಂಬಾ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುತ್ತಿದ್ದಾರೆ ಎಂದರು.

ಕಂಟೈನ್‍ಮೆಂಟ್ ಜೋನ್‍ನಲ್ಲಿರುವ ವಿದ್ಯಾರ್ಥಿಗಳಿಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಇಬ್ಬರು ಎನ್.ಸಿ.ಸಿ ಕಮಾಂಡರ್‍ಗಳ ನೇಮಕ ಮಾಡಲಾಗಿದೆ. ರೆಡ್‍ಕ್ರಾಸ್, ಸ್ಕೌಟ್ಸ್ ಅಂಡ್ ಗೈಡ್ಸ್‍ನವರು ನಮಗೆ ನೆರವಾಗಿದ್ದಾರೆ ಎಂದರು.

ಕ್ಷೇತ್ರ ಶೀಕ್ಷಣಾಧಿಕಾರಿ ಗಳಾದ ಪರಮೇಶ್ವರಪ್ಪ, ಬಿ.ಇ.ಓ ಸಿದ್ದಪ್ಪ, ಮುಖ್ಯ ಅಧೀಕ್ಷಕರು, ಎನ್.ಸಿ.ಸಿ. ಕಮಾಂಡರ್‍ಗಳು ಉಪಸ್ಥಿತರಿದ್ದರು.

error: Content is protected !!