ದಾವಣಗೆರೆ, ಜು. 30- ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾಯಕೊಂಡ ಕ್ಷೇತ್ರದ ಎಲ್ಲಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಜಿ.ಪಂ., ತಾ.ಪಂ., ಗ್ರಾ.ಪಂ. ಸದಸ್ಯರುಗಳು, ಎಪಿಎಂಸಿ ಸದಸ್ಯರು, ಜನಪ್ರತಿನಿಧಿಗಳು, ಪಕ್ಷದ ಎಲ್ಲಾ ವಿಭಾಗದ ಅಧ್ಯಕ್ಷರು, ಪದಾಧಿಕಾರಿಗಳು, ಹಿತೈಷಿಗಳು, ಅಭಿಮಾನಿಗಳು ಪಾಲ್ಗೊಂಡು ಸಮಾರಂಭ ಯಶಸ್ವಿಗೊಳಿಸುವಂತೆ ಜಿ.ಪಂ. ಸದಸ್ಯ ಕೆ.ಎಸ್. ಬಸವರಾಜ ಕೋರಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಡಿದ್ದು ದಿನಾಂಕ 2ರಂದು ಬೆಳಿಗ್ಗೆ 11 ಗಂಟೆಗೆ ಎಲ್ಲಾ ಗ್ರಾಮ ಪಂಚಾಯ್ತಿಗಳಲ್ಲಿ ಏಕಕಾಲಕ್ಕೆ ನಡೆಯುವ ಪದಗ್ರಹಣ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದ ಪೀಠಿಕೆ ಓದುವ ಮೂಲಕ ಪ್ರತಿಜ್ಞಾ ವಿಧಿ ಸ್ವೀಕರಿಸುವ ಅವಕಾಶ ಸಿಕ್ಕಿರುವುದು ಸಂತಸ ತಂದಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಎಪಿಎಂಸಿ ಅಧ್ಯಕ್ಷ ಎಸ್.ಕೆ. ಚಂದ್ರಶೇಖರ್, ಮಾಯಕೊಂಡ ಬ್ಲಾಕ್ ಕಾಂಗ್ರೆಸ್ ವೀಕ್ಷಕ ಚಂದ್ರಶೇಖರ್, ಸಾಮಾಜಿಕ ಜಾಲ ತಾಣ ವಿಭಾಗದ ಅಧ್ಯಕ್ಷ ಪರಶುರಾಮ್ ಉಪಸ್ಥಿತರಿದ್ದರು.