ದಾವಣಗೆರೆ, ಜು.5- 16 ತಿಂಗಳ ಶಿಷ್ಯ ವೇತನಕ್ಕಾಗಿ ಆಗ್ರಹಿಸಿ, ನಗರದ ಜಯದೇವ ಮುರುಘ ರಾಜೇಂದ್ರ ವೃತ್ತದಲ್ಲಿ ಜೆಜೆಎಂ ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ, ಗೃಹ ವಿದ್ಯಾರ್ಥಿಗಳು ಇಂದು ತಮ್ಮ ಬೇಡಿಕೆಯ ಬಗ್ಗೆ ಪತ್ರ ಚಳವಳಿ ಪ್ರಾರಂಭಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಅಂಚೆ ಕಾರ್ಡ್ನಲ್ಲಿ ತಮ್ಮ ಸಮಸ್ಯೆಯನ್ನು ಸಂಕ್ಷಿಪ್ತವಾಗಿ ಹೇಳಿಕೊಂಡಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಪ್ರತಿಭಟನಾ ಸ್ಥಳಕ್ಕಾಗಮಿಸಿ, ಕಾಲೇಜಿನ ಆಡಳಿತ ಮಂಡಳಿಯೇ ಶಿಷ್ಯ ವೇತನ ನೀಡುವಂತೆ ಸೂಚಿಸಲಾಗಿದೆ. ಇದಕ್ಕೆ ಆಡಳಿತ ಮಂಡಳಿ ಕೂಡ ಒಪ್ಪಿಕೊಂಡಿದೆ. ಸೋಮವಾರದ ನಂತರ ಶಿಷ್ಯವೇತನ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ವಿದ್ಯಾರ್ಥಿಗಳಿಗೆ ಭರವಸೆ ನೀಡಿ, ಮುಷ್ಕರ ಕೈ ಬಿಡಲು ಮನವಿ ಮಾಡಿದ್ದರು.
ಸಚಿವರ ಭರವಸೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಭಾನುವಾರದ ಮುಷ್ಕರ ನಿಲ್ಲಿಸಿ, ಸೋಮವಾರ ಪ್ರಾರಂಭಿಸುವುದಾಗಿ ತಿಳಿಸಿದ್ದರು. ನಂತರ ಈಗ ವಿದ್ಯಾರ್ಥಿಗಳು ತಮ್ಮ ಬೇಡಿಕೆಯ ಬಗ್ಗೆ ಪತ್ರ ಚಳವಳಿ ಪ್ರಾರಂಭಿಸಿದ್ದಾರೆ. ಪ್ರಧಾನಿ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಅಂಚೆ ಕಾರ್ಡ್ನಲ್ಲಿ ತಮ್ಮ ಸಮಸ್ಯೆ ಹೇಳಿಕೊಂಡಿದ್ದಾರೆ.