6 ಜನರಿಗೆ ಕೊರೊನಾ, 1 ಸಾವು

ದಾವಣಗೆರೆ, ಜು. 7 – ಜಿಲ್ಲೆಯಲ್ಲಿ ಮಂಗಳವಾರ ಆರು ಕೊರೊನಾ ಪ್ರಕರಣಗಳು ಕಂಡು ಬಂದಿದ್ದು, ಒಬ್ಬರು ಮೃತಪಟ್ಟಿದ್ದಾರೆ.

ಸೋಂಕು ಪತ್ತೆಯಾದವರಲ್ಲಿ ಐವರು ಜಿಲ್ಲೆಯವರಾಗಿದ್ದರೆ, ಒಬ್ಬರು ರಾಣೇಬೆನ್ನೂರಿನಿಂದ ಜಿಲ್ಲೆಗೆ ಬಂದವರಾಗಿದ್ದಾರೆ.

55 ವರ್ಷದ ರಾಣೇಬೆನ್ನೂರಿನ ಮಾರುತಿನಗರದ ವ್ಯಕ್ತಿಯೊಬ್ಬರು ಉಸಿರಾಟದ ಸಮಸ್ಯೆಯಿಂದ ಮೊದಲು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ, ನಂತರ ಸಿ.ಜಿ. ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಸಕ್ಕರೆ ಕಾಯಿಲೆ, ರಕ್ತದೊತ್ತಡ, ಶ್ವಾಸಕೋಶದ ಸೋಂಕು ಹಾಗೂ ನ್ಯುಮೋನಿಯಾದಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗಿದೇ ಅವರು ಸಾವನ್ನಪ್ಪಿದ್ದಾರೆ.

ಉಳಿದಂತೆ ಬಾಷಾನಗರ, ಚೌಕಿಪೇಟೆಯ ತಲಾ ಒಬ್ಬರು, ನಿಟುವಳ್ಳಿಯ ಇಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಚನ್ನಗಿರಿಯ ನಲ್ಲೂರಿನ 62 ವರ್ಷದ ಮಹಿಳೆಯಲ್ಲಿ ಕೊರೊನಾ ಸೋಂಕಿರುವುದು ಕಂಡು ಬಂದಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಸಕ್ರಿಯ ಕೊರೊನಾ ಸೋಂಕಿತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಇದುವರೆಗೂ ಜಿಲ್ಲೆಯಲ್ಲಿ ಕೊರೊನಾದಿಂದ 13 ಜನರು ಮೃತಪಟ್ಟಿದ್ದಾರೆ.

error: Content is protected !!