ಮಲೇಬೆನ್ನೂರು, ಜು. 9 – ಸುಕ್ಷೇತ್ರ ಉಕ್ಕಡಗಾತ್ರಿಯಲ್ಲಿ ಪವಾಡ ಪುರುಷ ಶ್ರೀಗುರು ಕರಿಬಸವೇಶ್ವರ ಅಜ್ಜಯ್ಯನ ಗದ್ದುಗೆ ದರ್ಶನವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ ಎಂದು ಟ್ರಸ್ಟ್ ಕಮಿಟಿ ಕಾರ್ಯದರ್ಶಿ ಸುರೇಶ್ ತಿಳಿಸಿದ್ದಾರೆ.
ಬೆಂಗಳೂರು ಸೇರಿದಂತೆ ಎಲ್ಲಾ ಕಡೆ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವುದರಿಂದ ಮತ್ತು ನಗರಗಳಿಂದ ಭಕ್ತರು ಆಗಮಿಸುತ್ತಿರುವುದರಿಂದ ಇಲ್ಲಿಗೂ ಸೋಂಕು ಹರಡಬಹುದೆಂಬ ಉದ್ದೇಶದಿಂದ ಮುಂಜಾಗೃತಾ ಕ್ರಮವಾಗಿ ಭಕ್ತರಿಗೆ ಅಜ್ಜಯ್ಯನ ದರ್ಶನವನ್ನು ನಿಲ್ಲಿಸಲಾಗಿದ್ದು, ದರ್ಶನದ ಮುಂದಿನ ದಿನಾಂಕವನ್ನು ತಿಳಿಸಲಾಗುವುದೆಂದು ಸುರೇಶ್ ಹೇಳಿದರು.