ದಾವಣಗೆರೆ, ಜು.17- ದಾವಣಗೆರೆ-ಹರಿಹರ ನಗರಾಭಿವೃದ್ದಿ ಪ್ರಾಧಿಕಾರದ ವ್ಯಾಪ್ತಿಯ ಪ್ರದೇಶಗಳಲ್ಲಿ ಅನಧಿಕೃತ ಬಡಾವಣೆ ನಿರ್ಮಾಣ ತಡೆಯುವ ಕುರಿತಂತೆ ಸಭೆಯು ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ದೂಡಾ ಕಚೇರಿಯಲ್ಲಿ ಇಂದು ನಡೆಯಿತು.
ದೂಡಾ ವ್ಯಾಪ್ತಿಯ ಕಂದಾಯ ಭೂಮಿಯಲ್ಲಿ ಬರುವ ದೊಡ್ಡಬೂದಿಹಾಳು, ದೊಡ್ಡಬಾತಿ, ಚಿಕ್ಕಬೂದಿಹಾಳು ಹಾಗೂ ಇತರೆ ಪ್ರದೇಶಗಳಲ್ಲಿ ಅನಧಿಕೃತ ಬಡಾವಣೆಗಳು ನಿರ್ಮಾಣವಾಗುತ್ತಿದ್ದು, ಇಂತಹ ಅನಧಿಕೃತ ಬಡಾವಣೆಗಳ ನಿರ್ಮಾಣವನ್ನು ತಡೆಯುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಅನಧಿಕೃತ ಬಡಾವಣೆಗಳನ್ನು ತೆರವುಗೊಳಿಸಲು ಏಳು ದಿನಗಳ ಕಾಲಾವಕಾಶ ನೀಡುವಂತೆ ಸಭೆಯಲ್ಲಿ ಅಧ್ಯಕ್ಷರು ಸೂಚನೆ ನೀಡಿದ್ದಾರೆ. ಇನ್ನು ಮುಂದೆ ಹೀಗೆ ಅನಧಿಕೃತ ಬಡಾವಣೆಗಳಲ್ಲಿನ ನಿವೇಶನಗಳನ್ನು ನೋಂದಣಿ ಮಾಡಿಕೊಳ್ಳಬಾರದೆಂದು ಹಾಗೂ ಖಾತೆಗಳನ್ನು ನೋಂದಣಿ ಮಾಡಿಕೊಳ್ಳದಂತೆ ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಲಾಯಿತು.
ದೂಡಾ ಆಯುಕ್ತ ಬಿ.ಟಿ.ಕುಮಾರಸ್ವಾಮಿ, ಹರಿಹರ ನಗರಸಭೆ ಪೌರಾಯುಕ್ತರಾದ ಶ್ರೀಮತಿ ಲಕ್ಷ್ಮೀದೇವಿ, ಪಾಲಿಕೆ ಉಪ ಆಯುಕ್ತ ಪ್ರಭು ಸಭೆಯಲ್ಲಿ ಹಾಜರಿದ್ದರು.